Central Bank of India Recruitment 2024 : ಸೆಂಟ್ರಲ್ ಬ್ಯಾಂಕ್ ಆಫ್​​ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ ಆರಂಭ, ಇಲ್ಲಿದೆ ಮಾಹಿತಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಬ್ಯಾಂಕ್ ನಲ್ಲಿ 253 ವಿವಿಧ ಮ್ಯಾನೇಜರ್ ಹುದ್ದೆಗಳು ಖಾಲಿಯಿದ್ದು, ಹುದ್ದೆಗಳಿಗೆ ಸಂಬಂಧ ಪಟ್ಟಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ದಿನಾಂಕ ಸೇರಿದಂತೆ ಇತರೆ ಮಾಹಿತಿಯೂ ಈ ಕೆಳಗಿದೆ.

Central Bank of India Recruitment 2024 : ಸೆಂಟ್ರಲ್ ಬ್ಯಾಂಕ್ ಆಫ್​​ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ ಆರಂಭ, ಇಲ್ಲಿದೆ ಮಾಹಿತಿ
Central Bank of India Recruitment
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Nov 29, 2024 | 6:20 PM

ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿದ್ದು ಈಗಾಗಲೇ ಹುಡುಕಾಟ ನಡೆಸುತ್ತಿದ್ದರೆ, ಅಂತಹ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ಇದೀಗ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ವಿಶೇಷ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, 253 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಮುಂದಿನ ತಿಂಗಳು ಡಿಸೆಂಬರ್ 3 ರೊಳಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಪೂರ್ಣ ವಿವರ:

  • ಚೀಫ್ ಮ್ಯಾನೇಜರ್ – 10
  • ಸೀನಿಯರ್ ಮ್ಯಾನೇಜರ್ – 56
  • ಮ್ಯಾನೇಜರ್ – 162
  • ಅಸಿಸ್ಟಂಟ್ ಮ್ಯಾನೇಜರ್ – 25
  • ಒಟ್ಟು ಹುದ್ದೆಗಳ ಸಂಖ್ಯೆ – 253 ಹುದ್ದೆಗಳು
  • ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ/ ಬಿ.ಟೆಕ್/ ಎಂಸಿಎ/ ಪದವಿ / ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಹ ಅಭ್ಯರ್ಥಿಗಳಿರಬೇಕಾದ ವಯೋಮಿತಿ:

  • ಚೀಫ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 34 ವರ್ಷ, ಗರಿಷ್ಠ 40 ವರ್ಷ ಹಾಗೂ ಸೀನಿಯರ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 30 ವರ್ಷ, ಗರಿಷ್ಠ 38 ವರ್ಷ ವಯಸ್ಸು ಮೀರಿರಬಾರದು.
  • ಇನ್ನುಳಿದಂತೆ ಮ್ಯಾನೇಜರ್ ಹುದ್ದೆಗೆ ಕನಿಷ್ಠ 27 ವರ್ಷ, ಗರಿಷ್ಠ 33 ವರ್ಷ ಹಾಗೂ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 23 ವರ್ಷ, ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು.
  • ಅದಲ್ಲದೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

  • ಆನ್ಲೈನ್ ಪ್ಲಾಟ್ ಫಾರ್ಮ್ ಪರೀಕ್ಷೆ, ಸನ್ನಿವೇಶ ಆಧಾರಿತ ಪರೀಕ್ಷೆ ಹಾಗೂ ವೈಯುಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮೇಲ್ಕಂಡ ಹುದ್ದೆಗಳ ವೇತನ ಶ್ರೇಣಿ:

  •  ಚೀಫ್ ಮ್ಯಾನೇಜರ್ – ರೂ 102300-120940
  • ಸೀನಿಯರ್ ಮ್ಯಾನೇಜರ್- ರೂ 85920-105280
  • ಮ್ಯಾನೇಜರ್ – ರೂ 64820-93960
  • ಅಸಿಸ್ಟಂಟ್ ಮ್ಯಾನೇಜರ್- ರೂ 48480-85920

ಇದನ್ನೂ ಓದಿ: ರಾಜ್ಯದಲ್ಲಿ ಖಾಲಿಯಿರುವ 750 ಭೂಮಾಪಕರ ಹುದ್ದೆಗೆ ನೇಮಕಾತಿ ಆರಂಭ, ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:

  • ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ/ ಮಹಿಳಾ ಅಭ್ಯರ್ಥಿಗಳು – ರೂ. 175
  • ಉಳಿದ ಅಭ್ಯರ್ಥಿಗಳು – ರೂ. 850

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 18, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 03, 2024
  • ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ : ಡಿಸೆಂಬರ್ 14, 2024
  • ಸಂದರ್ಶನ ನಡೆಯುವ (ತಾತ್ಕಾಲಿಕ) ದಿನಾಂಕ : ಜನವರಿ 2ನೇ ವಾರ, 2025

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?