ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ ಆರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ
Central Bank of India Recruitment 2025 : ನೀವು ಬ್ಯಾಂಕಿನಲ್ಲಿ ಉದ್ಯೋಗ ಮಾಡಲು ಆಸಕ್ತಿಯನ್ನು ಹೊಂದಿದ್ದು, ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದರೆ ಇಲ್ಲೊಂದು ಸುವರ್ಣ ಅವಕಾಶವಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು, ವಯೋಮಿತಿ, ಅರ್ಜಿ ಶುಲ್ಕ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಬ್ಯಾಂಕ್ ನಲ್ಲಿ 62 ಹುದ್ದೆಗಳು ಖಾಲಿಯಿದ್ದು, ಡಿಸೆಂಬರ್ 27 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು centralbankofindia.co.in ಅಧಿಕೃತ ವೆಬ್ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು, ಜನವರಿ 12 ರೊಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
* ಇಲಾಖೆಯ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
* ಹುದ್ದೆಯ ಹೆಸರು : ಸ್ಪೆಷಲಿಸ್ಟ್ ಆಫೀಸರ್
* ಒಟ್ಟು ಹುದ್ದೆಗಳು : 62
* ಉದ್ಯೋಗ ಸ್ಥಳ : ಭಾರತದಾದಂತ್ಯ
ವಿದ್ಯಾರ್ಹತೆ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಬಿಇ, ಬಿಟೆಕ್, ಬಿಎಸ್ಸಿ, ಎಂಸಿಎ ಎಂಎಸ್ಸಿ ಸೇರಿದಂತೆ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಆಗಿರಬೇಕು. ಗರಿಷ್ಠ ವಯಸ್ಸು 38 ವರ್ಷ ವಯಸ್ಸು ಮೀರಿರಬಾರದು. ಮೀಸಲಾತಿ ಅನುಗುಣವಾಗಿ ಒಬಿಸಿ ವರ್ಗದವರಿಗೆ, ಎಸ್‌ಸಿ, ಎಸ್‌ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
ಆಯ್ಕೆ ಪ್ರಕ್ರಿಯೆ
* ಸಂದರ್ಶನ
* ಮೆರಿಟ್ ಪಟ್ಟಿ
ಅರ್ಜಿ ಶುಲ್ಕ
ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳಿಗೆ 750/-ರೂ ಅರ್ಜಿ ಶುಲ್ಕವಿರುತ್ತದೆ. ಇನ್ನುಳಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ