Central Bank of India Recruitment: ಬ್ಯಾಂಕ್ ನೇಮಕಾತಿ: 1000 ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jul 03, 2023 | 2:16 PM

Central Bank of India Recruitment: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

Central Bank of India Recruitment: ಬ್ಯಾಂಕ್ ನೇಮಕಾತಿ: 1000 ಹುದ್ದೆಗಳಿಗೆ ಅರ್ಜಿ ಆಹ್ವಾನ
Central Bank of India Recruitment
Follow us on

Central Bank of India Recruitment: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಮ್ಯಾನೇಜರ್ (ಮೈನ್​ಸ್ಟ್ರೀಮ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿ ವಿವರಗಳು:

  • ಬ್ಯಾಂಕ್ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
  • ಹುದ್ದೆಗಳ ಸಂಖ್ಯೆ: 1000
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಯ ಹೆಸರು: ಮ್ಯಾನೇಜರ್ (ಮೈನ್​​ಸ್ಟ್ರೀಮ್)

ಶೈಕ್ಷಣಿಕ ಅರ್ಹತೆ:

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , CAIIB ಅನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 32 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • OBC ಅಭ್ಯರ್ಥಿಗಳಿಗೆ: 03 ವರ್ಷಗಳು
  • SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
  • PWBD ಅಭ್ಯರ್ಥಿಗಳಿಗೆ: 10 ವರ್ಷಗಳು

ಅರ್ಜಿ ಶುಲ್ಕ:

  • SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ: ರೂ.175/-
  • ಎಲ್ಲಾ ಇತರ ಅಭ್ಯರ್ಥಿಗಳಿಗೆ: ರೂ.850/-

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 48170 ರಿಂದ ರೂ. 69810/- ರವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 15-07-2023

ಇದನ್ನೂ ಓದಿ: IBPS Clerk Recruitment 2023: ಐಬಿಪಿಎಸ್​ ನೇಮಕಾತಿ: ಕ್ಲರ್ಕ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: centralbankofindia.co.in