Central Railway Recruitment 2022: 2422 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ಕ್ಲಾಸ್ ಪಾಸ್ ಆದವರಿಗೆ ಉದ್ಯೋಗಾವಕಾಶ
2422 Apprentice Vacancies ಸೆಂಟ್ರಲ್ ರೈಲ್ವೆಯಲ್ಲಿ 2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, 10ನೇ ಕ್ಲಾಸ್ ಪಾಸ್ ಆದವರಿಗೆ ಉದ್ಯೋಗಾವಕಾಶ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಕೇಂದ್ರ ರೈಲ್ವೇ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ 2422 ಅಪ್ರೆಂಟಿಸ್ಗಳ ನೇಮಕಾತಿಗೆ(Central Railway Recruitment 2022) ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅಭ್ಯರ್ಥಿಗಳು ಜನವರಿ 15, 2023ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಇದನ್ನೂ ಓದಿ: Job News: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಮುಂಬೈ ಕ್ಲಸ್ಟರ್- 1659 ಹುದ್ದೆಗಳು, ಭೂಸಾವಲ್ ಕ್ಲಸ್ಟರ್- 418, ಪುಣೆ ಕ್ಲಸ್ಟರ್- 152, ನಾಗ್ಪುರ ಕ್ಲಸ್ಟರ್- 114 ಹುದ್ದೆಗಳು, ಸೊಲ್ಲಾಪುರ ಕ್ಲಸ್ಟರ್- 79 ಹುದ್ದೆಗಳಿಗೆ ಸೇರಿದಂತೆ ಒಟ್ಟ 2422 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು RRC CR ನ ಅಧಿಕೃತ ವೆಬ್‌ಸೈಟ್ rrccr.com ಮೂಲಕ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ವಿದ್ಯಾರ್ಹತೆ
ಕೇಂದ್ರ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಅಭ್ಯರ್ಥಿಯು 10ನೇ ತರಗತಿಯ ಪರೀಕ್ಷೆಯನ್ನು ಅಥವಾ ಅದಕ್ಕೆ ಸಮಾನವಾದ ಕನಿಷ್ಠ 50% ನೊಂದಿಗೆ ಉತ್ತೀರ್ಣರಾಗಿರಬೇಕು.
ಅರ್ಜಿ ಶುಲ್ಕ
ಅರ್ಜಿ ಶುಲ್ಕ 100 ರೂ. ಪಾವತಿ ಗೇಟ್‌ವೇ ಮೂಲಕ ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಯನ್ನು ಮಾಡಬೇಕಾಗುತ್ತದೆ. ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕಿಂಗ್/SBI ಚಲನ್ ಇತ್ಯಾದಿಗಳನ್ನು ಬಳಸಿಕೊಂಡು ಪಾವತಿಯನ್ನು ಮಾಡಬಹುದು. ಹೆಚ್ಚಿನ ಸಂಬಂಧಿತ ವಿವರಗಳಿಗಾಗಿ ಅಭ್ಯರ್ಥಿಗಳು RRC ಯ ಅಧಿಕೃತ ಸೈಟ್ ಅನ್ನು ಪರಿಶೀಲಿಸಬಹುದು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ವರ್ಷ ಪೂರ್ಣಗೊಂಡಿರಬೇಕು. ಅಲ್ಲದೇ 15-12-2022 ಕ್ಕೆ 24 ವರ್ಷ ಮೀರಿರಬಾರದು. ಇನ್ನು SC/ST ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 05 ಹಾಗೂ OBC ವರ್ಗಕ್ಕೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಇನ್ನಷ್ಟು ಹುದ್ದೆಗಳ ನೇಮಕಾತಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ