ಅಂಗವಿಕಲ ಪುನರ್ವಸತಿ ಕೇಂದ್ರ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಂಗವಿಕಲ ಪುನರ್ವಸತಿ ಕೇಂದ್ರ ವತಿಯಿಂದ ಗೌರವ ಧನದ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಲಾಗಿದೆ.
ಬೆಂಗಳೂರು: ಜಿಲ್ಲಾ ಅಂಗವಿಕಲ ಪುನರ್ವಸತಿ ಕೇಂದ್ರ (Rehabilitation of Persons with Disabilities) ವತಿಯಿಂದ ಗೌರವ ಧನದ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಲಾಗಿದೆ. ಅಕೌಂಟ್ಂಟ್ ಕಂ ಕ್ಲರ್ಕ್, ಲೆದರ ವರ್ಕರ್, ಶೂ ಮೇಕರ್, ಸ್ವೀಚ್ ಥೆರಪಿಸ್ಟ್ ಮತ್ತು ಆಡಿಯೊಲಜಿಸ್ಟ್, ಮೊಬಿಲಿಟಿ ಇನ್ಸ್ ಟ್ರಕ್ಟರ್, ಇಯರ್ ಮೊಲ್ಡ್ ಟೆಕ್ನಿಷಿಯನ್, ಕೀಲು ಮತ್ತು ಮೂಳೆ ತಜ್ಞರು, ಆಪ್ತಾಲ್ಮೋಲಜಿಸ್ಟ್, ಇ.ಎನ್,ಟಿ ಸ್ಪೇಚಲಿಸ್ಟ್, ಸೈಕಿಯಾಟ್ರಸ್ಟ್, ಕಂಪ್ಯೂಟರ್ ಆಪರೇಟರ್ ಹಾಗೂ ಕೃತಕಾಂಗ ಜೋಡಣೆ ಪಿ ಮತ್ತು ಓ ಅಭಿಯಂತರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಅಂಗವಿಕರಲ ಪುರ್ನವಸತಿ ಕೇಂದ್ರ, ರವಿ ಕಿರ್ಲೋಸ್ಕರ್ ಆಸ್ಪತ್ರೆ ಆವರಣ, ಪೀಣ್ಯ, 1ನೇ ಹಂತ, ಬೆಂಗಳೂರು-560058 ಇಲ್ಲಿಗೆ ಮುದ್ದಾಂ ಅಥವಾ ಅಂಚೆ ಮೂಲಕ ಜನವರಿ 25 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8041179472, 8431308600, 9164496483ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:40 pm, Fri, 6 January 23