ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಹೆಡ್ ಕಾನ್ಸ್‌ಟೇಬಲ್ ಜಿಡಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ವಿಭಾಗದಲ್ಲಿ ಒಟ್ಟು 249 ಹುದ್ದೆಗಳು ಖಾಲಿಯಿದ್ದು, ಪುರುಷರು ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ನೇಮಕಾತಿ ನಡೆಯಲಿದೆ. ಅದರಂತೆ ಆಸಕ್ತ ಅಭ್ಯರ್ಥಿಗಳು ಅಭ್ಯರ್ಥಿಗಳು CISF-cisf.gov.in ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದು. ಇನ್ನು ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31, 2022 ಆಗಿದ್ದು, ಅದಕ್ಕೂ ಮುನ್ನ ಅರ್ಜಿ ಸಲ್ಲಿಸಬೇಕಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಯ ವಿವರಗಳು:
ಪುರುಷ ಅಭ್ಯರ್ಥಿಗಳಿಗೆ ಲಭ್ಯವಿರುವ ಖಾಲಿ ಹುದ್ದೆಗಳು- 181
ಮಹಿಳಾ ಅಭ್ಯರ್ಥಿಗಳಿಗೆ ಖಾಲಿ ಇರುವ ಹುದ್ದೆಗಳು- 68
ಅರ್ಹತಾ ಮಾನದಂಡ:
ಅಭ್ಯರ್ಥಿಗಳು ಕ್ರೀಡೆ ಮತ್ತು ಅಥ್ಲೆಟಿಕ್ಸ್‌ನಲ್ಲಿ ರಾಜ್ಯ/ರಾಷ್ಟ್ರೀಯ/ಅಂತರರಾಷ್ಟ್ರೀಯ ಪ್ರತಿನಿಧಿಸುವ ಕ್ರೆಡಿಟ್‌ನೊಂದಿಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 12 ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಆಗಸ್ಟ್ 1, 2021 ರಂತೆ 18 ವರ್ಷದಿಂದ 23 ವರ್ಷಗಳ ನಡುವೆ ಇರಬೇಕು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.100 ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳಿಗೆ, SC ಮತ್ತು ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಆಯ್ಕೆಯನ್ನು ಸೆಪ್ಟೆಂಬರ್ 1, 2019 ರಿಂದ ಮಾರ್ಚ್ 31, 2022 ರವರೆಗೆ ನಡೆದ ಕ್ರೀಡಾ ಪಂದ್ಯಾವಳಿಗಳಲ್ಲಿನ ಅವರ ಪ್ರದರ್ಶನದ ಆಧಾರದ ಮೇಲೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ಪ್ರಾಂತ್ಯದಲ್ಲೂ ಕಾರ್ಯ ನಿರ್ವಹಿಸಲು ಸಿದ್ಧರಿರಬೇಕು.
ಪ್ರಮುಖ ದಿನಾಂಕಗಳು:
ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮಾರ್ಚ್ 31, 2022 ರಂದು ಅಥವಾ ಮೊದಲು ಕಳುಹಿಸಬೇಕಾಗುತ್ತದೆ.
ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಓದಬಹುದು.
ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಐರ್ಲೆಂಡ್‌ಗೆ: 8 ಸಾವಿರ ಕಿ.ಮೀ ನಡೆದು ಕ್ರಿಕೆಟ್ಗೆ ಎಂಟ್ರಿ ಕೊಟ್ಟ ಯುವ ಬೌಲರ್..!
ಇದನ್ನೂ ಓದಿ: ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?
ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!
ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!