CISF Recruitment 2022: ಪಿಯುಸಿ ಪಾಸಾದವರಿಗೆ ಕೈಗಾರಿಕಾ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ: ವೇತನ 69 ಸಾವಿರ ರೂ.
CISF Recruitment 2022: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 100 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST) ಮತ್ತು ಮಾಜಿ ಸೈನಿಕರು (ESM) ಗೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್/ಫೈರ್ಮೆನ್ಗಳ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಪುರುಷರಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದ್ದು, ಅದರಂತೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ – cisfrectt.in ಮೂಲಕ ಅರ್ಜಿ ಸಲ್ಲಿಸಬಹುದು. CISF Recruitment 2022 ನೇಮಕಾತಿಯ ಕುರಿತಾದ ಮತ್ತಷ್ಟು ವಿವರಗಳು ಈ ಕೆಳಗಿನಂತಿವೆ.
CISF Recruitment 2022ಯ ಒಟ್ಟು ಹುದ್ದೆಗಳು:
ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ- 1149 ಹುದ್ದೆಗಳು
UR- 489 ಹುದ್ದೆಗಳು
EWS – 113 ಹುದ್ದೆಗಳು
SC – 161 ಹುದ್ದೆಗಳು
ST- 137 ಹುದ್ದೆಗಳು
OBC – 249 ಹುದ್ದೆಗಳು
CISF Recruitment 2022 ಗಾಗಿ ಅರ್ಹತಾ ಮಾನದಂಡಗಳು: ಅರ್ಜಿದಾರರು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸೈನ್ಸ್ ಸ್ಟ್ರೀಮ್ನಿಂದ ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
CISF Recruitment 2022 ಗಾಗಿ ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 23 ವರ್ಷಗಳ ಒಳಗಿರಬೇಕು. ಅಭ್ಯರ್ಥಿಗಳು 05/03/1999 ಕ್ಕಿಂತ ಮೊದಲು ಮತ್ತು 04/03/2004 ಕ್ಕಿಂತ ನಂತರ ಹುಟ್ಟಿರಬಾರದು. ಇನ್ನು ಮೀಸಲಾತಿ ವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
CISF Recruitment 2022 ಹುದ್ದೆಗಳ ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರಿಂದ 69,100 ರವರೆಗೆ ಮಾಸಿಕ ವೇತನ ಸಿಗಲಿದೆ.
CISF Recruitment 2022 ಅರ್ಜಿ ಶುಲ್ಕ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 100 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST) ಮತ್ತು ಮಾಜಿ ಸೈನಿಕರು (ESM) ಗೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
CISF Recruitment 2022 ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ), ದೈಹಿಕ ಗುಣಮಟ್ಟದ ಪರೀಕ್ಷೆ (ಪಿಎಸ್ಟಿ) ಮತ್ತು ದಾಖಲೆ ಪರಿಶೀಲನೆ (ಡಿವಿ) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
CISF Recruitment 2022 ಗೆ ಅರ್ಜಿ ಸಲ್ಲಿಸುವುದು ಹೇಗೆ? CISF ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಗಳ ಪ್ರಕಾರ ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ cisfrectt.in ನಲ್ಲಿ ಮಾರ್ಚ್ 4 ರೊಳಗೆ ಅರ್ಜಿ ಸಲ್ಲಿಸಬೇಕು.
CISF Recruitment 2022 ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 4, 2022 (ಸಂಜೆ 5:00 ರವರೆಗೆ)
CISF Recruitment 2022 ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.