CISF Recruitment 2022: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF) ಅಥವಾ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್‌ಗಳ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ – www.cisfrectt.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆರಂಭಿಕ ಮಾಸಿಕ ವೇತನವಾಗಿ 21700 ರೂ. ಸಿಗಲಿದೆ. ಹಾಗೆಯೇ 69100 ರೂ.ವರೆಗೆ ವೇತನ ಹೆಚ್ಚಳವಾಗಲಿದೆ.
ವಯೋಮಿತಿ:
ಅಭ್ಯರ್ಥಿಯು 01.08.2022 ರಂತೆ 18 ರಿಂದ 23 ವರ್ಷಗಳ ನಡುವೆ ಇರಬೇಕು. ಅಭ್ಯರ್ಥಿಗಳು 02/08/1999 ಕ್ಕಿಂತ ಮೊದಲು ಮತ್ತು 01/08/2004 ಕ್ಕಿಂತ ನಂತರ ಹುಟ್ಟಿರಬಾರದು.
ವಿದ್ಯಾರ್ಹತೆ:
ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯ ಸ್ವೀಕೃತಿಯ ಅಂತಿಮ ದಿನಾಂಕದ ಮೊದಲು ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿಯಿಂದ 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಇದನ್ನೂ ಓದಿ:CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಮಹಿಳಾ ಅಭ್ಯರ್ಥಿಗಳು ಮತ್ತು ಮೀಸಲಾತಿಗೆ ಅರ್ಹರಾಗಿರುವ ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST), ಮತ್ತು ಮಾಜಿ ಸೈನಿಕರು (ESM) ಗೆ ಸೇರಿದವರು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇದನ್ನೂ ಓದಿ: Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 20, 2022.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.