CISF Recruitment 2022: ಕೈಗಾರಿಕಾ ಭದ್ರತಾ ಪಡೆಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CISF Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

CISF Recruitment 2022: ಕೈಗಾರಿಕಾ ಭದ್ರತಾ ಪಡೆಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
CISF Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 24, 2022 | 9:21 PM

CISF Recruitment 2022: ಅರೆಸೈನಿಕ ಪಡೆಗಳಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ ಖಾಲಿ ಇರುವ ಹೆಡ್ ಕಾನ್‌ಸ್ಟೆಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

CISF Recruitment 2022: ಹುದ್ದೆ ವಿವರಗಳು: ಹೆಡ್ ಕಾನ್‌ಸ್ಟೇಬಲ್ (ಜಿಡಿ) – 249 ಹುದ್ದೆಗಳು

CISF Recruitment 2022:ಅರ್ಹತಾ ಮಾನದಂಡಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ/ಮಂಡಳಿಯಿಂದ 12ನೇ ತರಗತಿ ಪಾಸಾದ ಪ್ರಮಾಣ ಪತ್ರ ಹೊಂದಿರಬೇಕು. ಜೊತೆಗೆ ಕ್ರೀಡೆ ಮತ್ತು ಅಥ್ಲೆಟಿಕ್ಸ್‌ನಲ್ಲಿ ರಾಜ್ಯ/ರಾಷ್ಟ್ರೀಯ/ಅಂತರರಾಷ್ಟ್ರೀಯ ಪ್ರತಿನಿಧಿಸಿರಬೇಕು.

CISF Recruitment 2022: ವಯೋಮಿತಿ 18 ರಿಂದ 23 ವರ್ಷಗಳ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

CISF Recruitment 2022: ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ- 100 ರೂ. (ಮಹಿಳೆಯರು ಮತ್ತು SC/ST ಅಭ್ಯರ್ಥಿಗಳಿಗೆ ಶುಲ್ಕವಿಲ್ಲ).

CISF Recruitment 2022: ವೇತನ: ಅಭ್ಯರ್ಥಿಗಳಿಗೆ ಪೇ ಮ್ಯಾಟ್ರಿಕ್ಸ್ ಲೆವೆಲ್-4 ಪ್ರಕಾರ 25 ಸಾವಿರದಿಂದ 81 ಸಾವಿರದವರೆಗೆ ವೇತನ ನೀಡಲಾಗುತ್ತದೆ.

CISF Recruitment 2022: ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಮಾರ್ಚ್ 2022 (ಸಂಜೆ 5 ಗಂಟೆಯವರೆಗೆ)

CISF Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?