CISF Recruitment 2022: ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 92 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Oct 09, 2022 | 7:45 AM

CISF Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

CISF Recruitment 2022: ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 92 ಸಾವಿರ ರೂ.
jobs
Follow us on

CISF Recruitment 2022: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿನ (CISF) ಹೆಡ್ ಕಾನ್ಸ್‌ಟೇಬಲ್ (ಮಿನಿಸ್ಟ್ರೀಯಲ್) ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಸ್ಟೆನೋಗ್ರಾಫರ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 540

ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿಯಲ್ಲಿ ಪಾಸ್ ಆಗಿರಬೇಕು.

ಇದನ್ನೂ ಓದಿ
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 25 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:
ಈ ನೇಮಕಾತಿಗಾಗಿ ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು ರೂ. 100/- ಪಾವತಿಸಬೇಕಾಗುತ್ತದೆ.

ವೇತನ:

  • ಹೆಡ್​ ಕಾನ್ಸ್​ಟೇಬಲ್- 25,500 ರಿಂದ 81,100/ ರೂ.
  • ಸಹಾಯಕ ಸಬ್ ಇನ್‌ಸ್ಪೆಕ್ಟರ್- 29,200 ರಿಂದ 92,300/ ರೂ.

ಆಯ್ಕೆ ಪ್ರಕ್ರಿಯೆ:

  • ದೈಹಿಕ ಗುಣಮಟ್ಟದ ಪರೀಕ್ಷೆ (PST)
  • OMR / ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
  • ಸ್ಕಿಲ್ ಟೆಸ್ಟ್

ವೈದ್ಯಕೀಯ ಪರೀಕ್ಷೆ
ದಾಖಲೆಯ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 25 ಅಕ್ಟೋಬರ್ 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.