CISF Recruitment 2022: ಪಿಯುಸಿ ಪಾಸಾದವರಿಗೆ ಕೇಂದ್ರ ಭದ್ರತಾ ಪಡೆಯಲ್ಲಿದೆ ಉದ್ಯೋಗಾವಕಾಶ
CISF Recruitment 2022: ಈ ಹುದ್ದೆಗಳಿಗೆ (CISF Recruitment) ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ವೆಬ್ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
CISF Recruitment 2022: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (CISF Recruitment 2022) ಹೆಡ್ ಕಾನ್ಸ್ಟೇಬಲ್ (ಮಿನಿಸ್ಟ್ರೀಯಲ್) ಮತ್ತು ಸಹಾಯಕ ಸಬ್ ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್) ಹುದ್ದೆಗಳಿಗೆ ಅರ್ಜಿಗಳನ್ನು ಕೋರಲಾಗಿದೆ. ಈ ಹುದ್ದೆಗಳಿಗೆ (CISF Recruitment) ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ವೆಬ್ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 25. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗೆ ನೀಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿ ಕಲೆಹಾಕಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 540
ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 25 ವರ್ಷಗಳ ನಡುವೆ ಇರಬೇಕು.
ಅರ್ಜಿ ಶುಲ್ಕ: ಈ ನೇಮಕಾತಿಯ ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು ರೂ. 100/- ಪಾವತಿಸಬೇಕಾಗುತ್ತದೆ.
ವೇತನ:
- ಹೆಡ್ ಕಾನ್ಸ್ಟೇಬಲ್-–25,500 ರಿಂದ 81,100/ ರೂ.
- ಸಹಾಯಕ ಸಬ್ ಇನ್ಸ್ಪೆಕ್ಟರ್- 29,200 ರಿಂದ 92,300/ ರೂ.
ಆಯ್ಕೆ ಪ್ರಕ್ರಿಯೆ: ದೈಹಿಕ ಗುಣಮಟ್ಟದ ಪರೀಕ್ಷೆ (PST) ಮತ್ತು OMR / ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಸ್ಕಿಲ್ ಟೆಸ್ಟ್ ಮತ್ತು ವೈದ್ಯಕೀಯ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 26, 2022
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 25, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.