AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆಗೆ ಸಿಎಂ ಖಡಕ್​ ಸೂಚನೆ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ನೇಮಕಾತಿ ಪ್ರಕ್ರಿಯೆಗಳ ವಿಳಂಬ, ಕಾನೂನು ತೊಡಕುಗಳ ಕುರಿತು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಚರ್ಚೆ ಮಾಡಲಾಗಿದ್ದು, ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆಗೆ ಸಿಎಂ ಖಡಕ್​ ಸೂಚನೆ ನೀಡಿದ್ದಾರೆ.

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆಗೆ ಸಿಎಂ ಖಡಕ್​ ಸೂಚನೆ
ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆಗೆ ಸಿಎಂ ಖಡಕ್​ ಸೂಚನೆ
Follow us
ಗಂಗಾಧರ​ ಬ. ಸಾಬೋಜಿ
|

Updated on: Sep 25, 2024 | 6:49 PM

ಬೆಂಗಳೂರು, ಸೆಪ್ಟೆಂಬರ್​ 25: ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಕೂಡ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ನಡೆದ ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಲಾಗಿದೆ.

ನೇಮಕಾತಿ ಪ್ರಕ್ರಿಯೆಗಳ ವಿಳಂಬ, ಕಾನೂನು ತೊಡಕುಗಳ ಕುರಿತು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: KPSC-KSDA AAO Recruitment 2024: ರಾಜ್ಯ ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿಗಳ ನೇಮಕ, ಆಕರ್ಷಕ ಸಂಬಳ, ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ

ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿ, ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಲ್ಯಾಷ್​ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಮನವರಿಕೆ ಮಾಡಲಾಗಿದೆ.

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು ಸಚಿವ ಸಂಪುಟದ ಮುಂದೆ ವಿಷಯ ಮಂಡಿಸುವುದು. ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು. ಒಂದು ವೇಳೆ ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಯುಪಿಎಸ್​​ಸಿ ಪರೀಕ್ಷೆ ದಿನವೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಿಗದಿ: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ

ಪ್ರತಿ ನೇಮಕಾತಿ ಪ್ರಕ್ರಿಯೆಯೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕು. ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುವುದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಬೇಕು. ಮುಂದಿನ ವಾರ ಮತ್ತೊಮ್ಮೆ ಸಭೆ ಕರೆದು ಸಂಪೂರ್ಣ ಮಾಹಿತಿ ಪಡೆದು ಚರ್ಚಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವರದಿ: ಈರಣ್ಣ ಬಸವ 

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.