Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jul 25, 2022 | 4:29 PM

Coal India MT Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೋಲ್ ಇಂಡಿಯಾದ ಅಧಿಕೃತ ವೆಬ್‌ಸೈಟ್ coalindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Coal India Recruitment 2022
Follow us on

Coal India MT Recruitment 2022: ದೇಶದ ಪ್ರಮುಖ ಕಲ್ಲಿದ್ದಲು ಕಂಪೆನಿ ಕೋಲ್ ಇಂಡಿಯಾ ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಸಿಬ್ಬಂದಿ, ಮೆಟೀರಿಯಲ್ ಮ್ಯಾನೇಜ್‌ಮೆಂಟ್, ಮಾರ್ಕೆಟಿಂಗ್ ಮತ್ತು ಸೇಲ್ಸ್ ಟ್ರೈನಿ ಮತ್ತು ಇತರ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೋಲ್ ಇಂಡಿಯಾದ ಅಧಿಕೃತ ವೆಬ್‌ಸೈಟ್ coalindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳು: 481
  • ಸಿಬ್ಬಂದಿ ಮತ್ತು ಹೆಚ್​ಆರ್​ -138 ಹುದ್ದೆಗಳು
  • ಪರ್ಯಾವರ್ಣ್-68 ಹುದ್ದೆಗಳು
  • ವಸ್ತು ನಿರ್ವಹಣೆ-115 ಹುದ್ದೆಗಳು
  • ಮಾರ್ಕೆಟಿಂಗ್ ಮತ್ತು ಮಾರಾಟ-17 ಹುದ್ದೆಗಳು
  • ಅಭಿವೃದ್ಧಿ ವಿಭಾಗ-79 ಹುದ್ದೆಗಳು
  • ಕಾನೂನು ವಿಭಾಗ-54 ಹುದ್ದೆಗಳು
  • ಸಾರ್ವಜನಿಕ ಸಂಪರ್ಕಗಳು-06 ಹುದ್ದೆಗಳು
  • ಸಹಾಯಕ ಕಾರ್ಯದರ್ಶಿ-04 ಹುದ್ದೆಗಳು

ಅರ್ಹತಾ ಮಾನದಂಡಗಳು:
ಆಯಾ ಹುದ್ದೆಗಳಿ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಪಡಿಸಲಾಗಿದೆ. ಅದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 30 ವರ್ಷಕ್ಕಿಂತ ಹೆಚ್ಚಿರಬಾರದು.

ಅರ್ಜಿ ಶುಲ್ಕ:
ಸಾಮಾನ್ಯ, OBC ಮತ್ತು EWS ವರ್ಗದ ಅಭ್ಯರ್ಥಿಗಳು 1,180 ರೂಪಾಯಿಗಳನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ. ಇನ್ನು ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ಆಗಸ್ಟ್ 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.