CIL recruitment 2022: ಕೋಲ್ ಇಂಡಿಯಾ ನೇಮಕಾತಿ: ತಿಂಗಳ ವೇತನ 1.6 ಲಕ್ಷ ರೂ.

| Updated By: ಝಾಹಿರ್ ಯೂಸುಫ್

Updated on: Jun 24, 2022 | 8:15 AM

Coal India recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಕೋಲ್ ಇಂಡಿಯಾ ಲಿಮಿಟೆಡ್‌ನ ವೆಬ್‌ಸೈಟ್ www.coalindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾ ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ.

CIL recruitment 2022: ಕೋಲ್ ಇಂಡಿಯಾ ನೇಮಕಾತಿ: ತಿಂಗಳ ವೇತನ 1.6 ಲಕ್ಷ ರೂ.
Coal India recruitment 2022
Follow us on

Coal India recruitment 2022: ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರುವವರಿಗೆ ಅತ್ಯುತ್ತಮ ಉದ್ಯೋಗಾವಕಾಶಗಳಿವೆ. ಈಗಾಗಲೇ 1050 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯನ್ನು GATE 2022 ಸ್ಕೋರ್ ಆಧಾರದ ಮೇಲೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಕೋಲ್ ಇಂಡಿಯಾ ಲಿಮಿಟೆಡ್‌ನ ವೆಬ್‌ಸೈಟ್ www.coalindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾ ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು:
ಒಟ್ಟು ಹುದ್ದೆಗಳು – 1050
ಗಣಿಗಾರಿಕೆ – 699 ಹುದ್ದೆಗಳು
ಸಿವಿಲ್ – 160 ಹುದ್ದೆಗಳು
ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ – 124 ಹುದ್ದೆಗಳು
ಸಿಸ್ಟಮ್ಸ್ & EDP – 67 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಸಂಬಂಧಿತ ವಿಷಯಗಳಲ್ಲಿ BE/B.Tech/BSc ಇಂಜಿನಿಯರಿಂಗ್ ಪದವಿ ಮಾಡಿರಬೇಕು.

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ:
ಈ ಹುದ್ದೆಗಳಿಗೆ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 50,000 ರಿಂದ 1,60,000 ರೂ.ವರೆಗೆ ವೇತನ ಸಿಗಲಿದೆ.

ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ- ರೂ. 1000
SC/ST/ದಿವ್ಯಾಂಗ್/ESM/ – ರೂ. 180

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22 ಜುಲೈ, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.