Coal India Recruitment 2022: ಕೋಲ್ ಇಂಡಿಯಾ ಲಿಮಿಟೆಡ್ (CIL) ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆ ಈಗಾಗಲೇ ಚಾಲನೆಯಲ್ಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 22 ರೊಳಗೆ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೋಲ್ ಇಂಡಿಯಾದ ಅಧಿಕೃತ ವೆಬ್‌ಸೈಟ್ www.coalindia.in ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:-
ಒಟ್ಟು ಹುದ್ದೆಗಳು:
ಈ ನೇಮಕಾತಿ ಅಡಿಯಲ್ಲಿ ಒಟ್ಟು 1050 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಮೈನಿಂಗ್, ಸಿಸ್ಟಮ್ ಮತ್ತು ಇಡಿಪಿ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯುನಿಕೇಶನ್‌ನಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಹುದ್ದೆಗಳ ಹೆಸರು ಮತ್ತು ಹುದ್ದೆಗಳ ಸಂಖ್ಯೆ:
ವಿದ್ಯಾರ್ಹತೆ:
ಅರ್ಜಿದಾರರು ಸಂಬಂಧಿತ ಟ್ರೇಡ್‌ನಲ್ಲಿ ಕನಿಷ್ಠ 60% ಅಂಕಗಳೊಂದಿಗೆ BE/B.Tech/BSc ಇಂಜಿನಿಯರಿಂಗ್ ಮಾಡಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿದಾರನಿಗೆ ಗರಿಷ್ಠ 30 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅಂದರೆ 30 ವರ್ಷದವರೆಗಿನ ವಯಸ್ಸಿನವರು ಅರ್ಜಿ ಸಲ್ಲಿಸಬಹುದು.
ವೇತನ:
ಈ ಹುದ್ದೆಗಳೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 50,000 ದಿಂದ 1,60,000 ವೇತನ ಶ್ರೇಣಿಯನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 22, 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.