Coffee Board Recruitment 2023: ಕಾಫಿ ಬೋರ್ಡ್​ ನೇಮಕಾತಿ: ವೇತನ 30 ಸಾವಿರ ರೂ.

Coffee Board Recruitment 2023: ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 35 ವರ್ಷಗಳ ಒಳಗಿರಬೇಕು.

Coffee Board Recruitment 2023: ಕಾಫಿ ಬೋರ್ಡ್​ ನೇಮಕಾತಿ: ವೇತನ 30 ಸಾವಿರ ರೂ.
Coffee Board Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 25, 2023 | 2:24 PM

Coffee Board Recruitment 2023: ಕಾಫಿ ಬೋರ್ಡ್ ಆಫ್ ಇಂಡಿಯಾದಲ್ಲಿನ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿಗಳನ್ನು ಕಳುಹಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಕಾಫಿ ಬೋರ್ಡ್ ಆಫ್ ಇಂಡಿಯಾ
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ತಾಂತ್ರಿಕ ಸಹಾಯಕರು

ಶೈಕ್ಷಣಿಕ ಅರ್ಹತೆ:

ಕಾಫಿ ಬೋರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪೂರ್ಣಗೊಳಿಸಿರಬೇಕು .

ಇದನ್ನೂ ಓದಿ: BSF Recruitment 2023: ಗಡಿ ಭದ್ರತಾ ಪಡೆ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

ವಯೋಮಿತಿ:

ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 35 ವರ್ಷಗಳ ಒಳಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಆಸಕ್ತರು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ಸಾವಿರ ರೂ. ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ- cqd.coffeeboard@gmail.com ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 23-07-2023

ಅರ್ಜಿ ಡೌನ್​ಲೋಡ್ ಮಾಡುವುದು ಹೇಗೆ?

ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: indiacoffee.org

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್