Coffee Board Jobs 2023: ಕಾಫಿ ಬೋರ್ಡ್​ ಉದ್ಯೋಗಾವಕಾಶ: ಮಾಸಿಕ ವೇತನ 50 ಸಾವಿರ ರೂ.

Coffee Board Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕಾಫಿ ಬೋರ್ಡ್​ನ ಅಧಿಕೃತ ವೆಬ್​ಸೈಟ್ indiacoffee.org ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Coffee Board Jobs 2023: ಕಾಫಿ ಬೋರ್ಡ್​ ಉದ್ಯೋಗಾವಕಾಶ: ಮಾಸಿಕ ವೇತನ 50 ಸಾವಿರ ರೂ.
Coffee Board Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 07, 2023 | 3:19 PM

Coffee Board Recruitment 2023: ಭಾರತೀಯ ಕಾಫಿ ಮಂಡಳಿಯು (Coffee Board of India) ಕೆಲ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 5 ಬರಿಸ್ಟಾ ತರಬೇತುದಾರರನ್ನು (Barista Trainers) ನೇಮಕ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕಾಫಿ ಬೋರ್ಡ್​ನ ಅಧಿಕೃತ ವೆಬ್​ಸೈಟ್ indiacoffee.org ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಬರಿಸ್ಟಾ ಟ್ರೈನರ್ಸ್ಸ್- 5 ಹುದ್ದೆಗಳು

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ ಅಥವಾ ಮಂಡಳಿಯಿಂದ ಹೋಟೆಲ್ ಮ್ಯಾನೇಜ್ಮೆಂಟ್​ ವಿಭಾಗದಲ್ಲಿ ಪದವಿಯನ್ನು ಪಡೆದಿರಬೇಕು. ಅಲ್ಲದೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಇನ್ನು 3 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ:

ಈ ಹುದ್ದೆಗಳಿಗೆ 40 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ SC/ST ಅಭ್ಯರ್ಥಿಗಳಿಗೆ 3 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 50 ಸಾವಿರ ರೂ. ನೀಡಲಾಗುತ್ತದೆ.

ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 20, 2023

ಅರ್ಜಿ ಸಲ್ಲಿಸುವುದು ಹೇಗೆ?

ಕಾಫಿ ಬೋರ್ಡ್​ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸುಲಭ ವಿಧಾನ ಎಂದರೆ ಮೇಲ್ ಮಾಡುವುದು. ಅಂದರೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಯೊಂದಿಗೆ ನಿಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಬಹುದು.

ಇ ಮೇಲ್ ಮಾಡಬೇಕಾದ ಐಡಿ ಹೀಗಿದೆ: cqd.coffeeboard@gmail.com

ಉದ್ಯೋಗ ಸ್ಥಳ:

ಭಾರತೀಯ ಕಾಫಿ ಮಂಡಳಿಯ ಈ ನೇಮಕಾತಿಯು ಬೆಂಗಳೂರಿನ ಕೇಂದ್ರಿತವಾಗಿ ನಡೆಯುತ್ತಿದ್ದು, ಹೀಗಾಗಿ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದ ರಾಜಧಾನಿಯಲ್ಲೇ ಕೆಲಸ ಮಾಡುವ ಅವಕಾಶ ಇರಲಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?