Coffee Board Recruitment 2023: ಭಾರತೀಯ ಕಾಫಿ ಮಂಡಳಿಯು (Coffee Board of India) ಕೆಲ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 5 ಬರಿಸ್ಟಾ ತರಬೇತುದಾರರನ್ನು (Barista Trainers) ನೇಮಕ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕಾಫಿ ಬೋರ್ಡ್ನ ಅಧಿಕೃತ ವೆಬ್ಸೈಟ್ indiacoffee.org ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಬರಿಸ್ಟಾ ಟ್ರೈನರ್ಸ್ಸ್- 5 ಹುದ್ದೆಗಳು
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ ಅಥವಾ ಮಂಡಳಿಯಿಂದ ಹೋಟೆಲ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಪದವಿಯನ್ನು ಪಡೆದಿರಬೇಕು. ಅಲ್ಲದೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಇನ್ನು 3 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ:
ಈ ಹುದ್ದೆಗಳಿಗೆ 40 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ SC/ST ಅಭ್ಯರ್ಥಿಗಳಿಗೆ 3 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 50 ಸಾವಿರ ರೂ. ನೀಡಲಾಗುತ್ತದೆ.
ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್ನಲ್ಲಿದೆ ಉದ್ಯೋಗಾವಕಾಶ
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 20, 2023
ಅರ್ಜಿ ಸಲ್ಲಿಸುವುದು ಹೇಗೆ?
ಕಾಫಿ ಬೋರ್ಡ್ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸುಲಭ ವಿಧಾನ ಎಂದರೆ ಮೇಲ್ ಮಾಡುವುದು. ಅಂದರೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಯೊಂದಿಗೆ ನಿಮ್ಮ ರೆಸ್ಯೂಮ್ನ್ನು ಇ-ಮೇಲ್ ಮಾಡಬಹುದು.
ಇ ಮೇಲ್ ಮಾಡಬೇಕಾದ ಐಡಿ ಹೀಗಿದೆ: cqd.coffeeboard@gmail.com
ಉದ್ಯೋಗ ಸ್ಥಳ:
ಭಾರತೀಯ ಕಾಫಿ ಮಂಡಳಿಯ ಈ ನೇಮಕಾತಿಯು ಬೆಂಗಳೂರಿನ ಕೇಂದ್ರಿತವಾಗಿ ನಡೆಯುತ್ತಿದ್ದು, ಹೀಗಾಗಿ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದ ರಾಜಧಾನಿಯಲ್ಲೇ ಕೆಲಸ ಮಾಡುವ ಅವಕಾಶ ಇರಲಿದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.