CPRI Recruitment 2023: ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Mar 26, 2023 | 2:38 PM

CPRI Recruitment 2023: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್​ನ ಅಧಿಕೃತ ವೆಬ್​ಸೈಟ್ cpri.res.in ಗೆ ಭೇಟಿ ನೀಡುವ ಮೂಲಕ ಅರ್ಜಿ ಹಾಕಬಹುದಾಗಿದೆ.

CPRI Recruitment 2023: ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
CPRI Recruitment 2023
Follow us on

CPRI Recruitment 2023: ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಹೊಸ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಇಂಜಿನಿಯರಿಂಗ್ ಆಫೀಸರ್, ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 14 ರೊಳಗೆ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್​ನ ಅಧಿಕೃತ ವೆಬ್​ಸೈಟ್ cpri.res.in ಗೆ ಭೇಟಿ ನೀಡುವ ಮೂಲಕ ಅರ್ಜಿ ಹಾಕಬಹುದಾಗಿದೆ. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಆಯ್ಕೆಯಾದರೆ ಸಿಗುವ ವೇತನ ಎಷ್ಟು?  ಈ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಇನ್‌ಸ್ಟಿಟ್ಯೂಟ್ ಹೆಸರು : ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್
  • ಹುದ್ದೆಗಳ ಸಂಖ್ಯೆ: 99
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದ್ದೆಗಳ ಹೆಸರು: ಇಂಜಿನಿಯರಿಂಗ್ ಅಧಿಕಾರಿ, ತಂತ್ರಜ್ಞ

ಹುದ್ದೆಗಳ ವಿಭಾಗವಾರು ವಿವರಗಳು:

  • ಇಂಜಿನಿಯರಿಂಗ್ ಅಧಿಕಾರಿ- 40 ಹುದ್ದೆಗಳು
  • ವೈಜ್ಞಾನಿಕ ಸಹಾಯಕ- 4 ಹುದ್ದೆಗಳು
  • ಇಂಜಿನಿಯರಿಂಗ್ ಸಹಾಯಕ- 13 ಹುದ್ದೆಗಳು
  • ತಂತ್ರಜ್ಞ- 24 ಹುದ್ದೆಗಳು
  • ಸಹಾಯಕ- 18 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಗಳನ್ನು ನಿಗದಿಪಡಿಸಲಾಗಿದ್ದು. ಆಯಾ ವಿಭಾಗದ ಹುದ್ದೆಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ:

  • ಇಂಜಿನಿಯರಿಂಗ್ ಅಧಿಕಾರಿ- ರೂ.44900/-
  • ವೈಜ್ಞಾನಿಕ ಸಹಾಯಕ- ರೂ.35400/-
  • ಇಂಜಿನಿಯರಿಂಗ್ ಸಹಾಯಕ- ರೂ.35400/-
  • ತಂತ್ರಜ್ಞ- ರೂ.19900/-
  • ಸಹಾಯಕ- ರೂ.25500/-

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಏಪ್ರಿಲ್ 14, 2023

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

Published On - 2:38 pm, Sun, 26 March 23