CRPF Recruitment 2023: ಪಿಯುಸಿ ಪಾಸಾದವರಿಗೆ ಕೇಂದ್ರೀಯ ಮೀಸಲು ಪಡೆಯಲ್ಲಿದೆ ಉದ್ಯೋಗಾವಕಾಶ

| Updated By: Digi Tech Desk

Updated on: Jan 02, 2023 | 2:36 PM

CRPF Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CRPF ನ ಅಧಿಕೃತ ವೆಬ್‌ಸೈಟ್ crpfindia.com ಗೆ ಭೇಟಿ ನೀಡುವ ಮೂಲಕ ತಮ್ಮ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

CRPF Recruitment 2023: ಪಿಯುಸಿ ಪಾಸಾದವರಿಗೆ ಕೇಂದ್ರೀಯ ಮೀಸಲು ಪಡೆಯಲ್ಲಿದೆ ಉದ್ಯೋಗಾವಕಾಶ
CRPF Recruitment 2023
Follow us on

CRPF Recruitment 2023: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿನ ಹೆಡ್ ಕಾನ್ಸ್‌ಟೇಬಲ್ ಮತ್ತು ಎಎಸ್‌ಐ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CRPF ನ ಅಧಿಕೃತ ವೆಬ್‌ಸೈಟ್ crpfindia.com ಗೆ ಭೇಟಿ ನೀಡುವ ಮೂಲಕ ತಮ್ಮ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 1458
  • ಹೆಡ್ ಕಾನ್ಸ್‌ಟೇಬಲ್- 1315 ಹುದ್ದೆಗಳು
  • ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ (ಸ್ಟೆನೋ)- 143 ಹುದ್ದೆಗಳು

ವಿದ್ಯಾರ್ಹತೆ:

ಇದನ್ನೂ ಓದಿ
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

12ನೇ ತರಗತಿಯಲ್ಲಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ಎಎಸ್​ಐ ಸ್ಟೆನೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿಯಲ್ಲಿ ಪಾಸಾಗಿರಬೇಕು. ಹಾಗೆಯೇ ಪ್ರತಿ ನಿಮಿಷಕ್ಕೆ 30 ಪದಗಳ ಹಿಂದಿ ಟೈಪಿಂಗ್ ಮತ್ತು ನಿಮಿಷಕ್ಕೆ 35 ಪದಗಳ ಇಂಗ್ಲಿಷ್ ಟೈಪಿಂಗ್ ವೇಗವನ್ನು ಹೊಂದಿರಬೇಕಾಗುತ್ತದೆ.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಯಸ್ಸು 18 ರಿಂದ 25 ವರ್ಷಗಳ ನಡುವೆ ಇರಬೇಕು. ಮೀಸಲಾತಿ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿಯೂ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕ:

  • ಈ ಹುದ್ದೆಗಳ ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ- ಜನವರಿ 2, 2023
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 25, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

 

 

Published On - 8:15 am, Thu, 29 December 22