DC Office Recruitment 2023: ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ: ವಿದ್ಯಾರ್ಹತೆ ಬೇಕಿಲ್ಲ, ಕನ್ನಡ ಗೊತ್ತಿದ್ದರೆ ಸಾಕು..!

DC Office Bengaluru Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.

DC Office Recruitment 2023: ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ: ವಿದ್ಯಾರ್ಹತೆ ಬೇಕಿಲ್ಲ, ಕನ್ನಡ ಗೊತ್ತಿದ್ದರೆ ಸಾಕು..!
DC Office Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 23, 2023 | 2:20 PM

DC Office Bengaluru Recruitment 2023: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಲೋಡರ್, ಕ್ಲೀನರ್ ಸೇರಿದಂತೆ ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಲೋಡರ್ ಹುದ್ದೆಗಳು- 83
  • ಕ್ಲೀನರ್ ಹುದ್ದೆಗಳು- 22
  • ಒಟ್ಟು ಹುದ್ದೆಗಳ ಸಂಖ್ಯೆ- 105

ಅರ್ಹತಾ ಮಾನದಂಡ:

ಈ ಹುದ್ದೆಗಳಿಗೆ ಯಾವುದೇ ರೀತಿಯ ವಿದ್ಯಾರ್ಹತೆ ನಿಗದಿಪಡಿಸಲಾಗಿಲ್ಲ. ಬದಲಾಗಿ ಕನ್ನಡ ಮಾತನಾಡಲು ಗೊತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು ಎಂದು ತಿಳಿಸಲಾಗಿದೆ.

ವಯೋಮಿತಿ:

ಈ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷಗಳ ಒಳಗಿರಬೇಕು. ಇನ್ನು ಸರ್ಕಾರಿ ನಿಯಮನುಸಾರ ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.17000 ರಿಂದ 28950/- ರೂ.ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

Project Director, District Urban Development Cell, District Collector Office, 4th Floor, Bengaluru Urban District.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 15, 2023

ಅರ್ಜಿ ನಮೂನೆ ಡೌನ್​ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.