DCCB Chikkamagaluru Recruitment 2024 : ಡಿಸಿಸಿ ಬ್ಯಾಂಕ್‌ನಲ್ಲಿ 85 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Nov 11, 2024 | 1:55 PM

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದರೆ ಅಂತಹವರಿಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೆಳಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೂ ಮೊದಲು ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ.

DCCB Chikkamagaluru Recruitment 2024 : ಡಿಸಿಸಿ ಬ್ಯಾಂಕ್‌ನಲ್ಲಿ 85 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ
ಸಾಂದರ್ಭಿಕ ಚಿತ್ರ
Follow us on

ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿಯಿದ್ದು, ಉದ್ಯೋಗದ ಹುಡುಕಾಟದಲ್ಲಿದ್ದೀರಾ, ಇದೀಗ ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್​ ನಿಯಮಿತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ಈ ಬ್ಯಾಂಕ್ 85 ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು chikkamagalurudccbank.com ಈ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಹುದ್ದೆಗಳ ವಿವರ

* ಇಲಾಖೆ ಹೆಸರು : ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್

* ಹುದ್ದೆಗಳ ಸಂಖ್ಯೆ : 85

* ಹುದ್ದೆಗಳ ಹೆಸರು : ಸಹಾಯಕ ವ್ಯವಸ್ಥಾಪಕ : 4, ಮೊದಲ ವಿಭಾಗದ ಸಹಾಯಕ/ಮೇಲ್ವಿಚಾರಕರು : 18, ಕಿರಿಯ ಸಹಾಯಕ : 53 ಹಾಗೂ ಅಟೆಂಡರ್ : 10.

* ಉದ್ಯೋಗ ಸ್ಥಳ : ಚಿಕ್ಕಮಗಳೂರು

ಹುದ್ದೆವಾರು ವೇತನ ಶ್ರೇಣಿ :

* ಸಹಾಯಕ ವ್ಯವಸ್ಥಾಪಕರು : ರೂ. 36000-67550

* ಪ್ರಥಮ ದರ್ಜೆ ಸಹಾಯಕರು /ಮೇಲ್ವಿಚಾರಕರು : ರೂ. 27650-52650

* ಕಿರಿಯ ಸಹಾಯಕರು : ರೂ. 21400-42000

* ಸಹಾಯಕರು/ಅಟೆಂಡರ್ : ರೂ. 18600-32600

ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ

* ಸಹಾಯಕ ವ್ಯವಸ್ಥಾಪಕ, ಮೊದಲ ವಿಭಾಗದ ಸಹಾಯಕ/ಮೇಲ್ವಿಚಾರಕರು, ಕಿರಿಯ ಸಹಾಯಕ ಹಾಗೂ ಅಟೆಂಡರ್ ಈ ಹುದ್ದೆಗಳ ಅನುಸಾರವಾಗಿ ಅಭ್ಯರ್ಥಿಯೂ ಸ್ನಾತಕೋತ್ತರ, ಪದವಿ, ಎಸ್​ಎಸ್​​ಎಲ್​ಸಿ ವಿದ್ಯಾಭ್ಯಾಸವನ್ನು ಹೊಂದಿರಬೇಕು.

* ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಪೂರೈಸಿರಬೇಕು.

* ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಕಲಚೇತನ ಮತ್ತು ವಿಧವಾ ಮಹಿಳಾ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ

* ಸಾಮಾನ್ಯ ಅರ್ಹತೆ, ಒಬಿಸಿ- 1,500 ರೂಪಾಯಿ

* ಎಸ್​​ಸಿ, ಎಸ್​ಟಿ, ವಿಶೇಷ ಚೇತನರು- 750 ರೂ.

ಇದನ್ನೂ ಓದಿ: ಪದವಿ ಪಾಸಾಗಿದ್ದವರಿಗೆ ಎಸ್ಐಡಿಬಿಐ ಬ್ಯಾಂಕ್ ನಲ್ಲಿ ಉದ್ಯೋಗವಕಾಶ, ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ

* ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಸಂದರ್ಶನದ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.

ಆನ್‌ಲೈನ್ ಅರ್ಜಿ ಸಲ್ಲಿಸುವುದು ಹೇಗೆ?

* chikkamagalurudccbank.com ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.

* ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ ಅರ್ಹ ಅಭ್ಯರ್ಥಿಗಳಾಗಿದ್ದರೆ ಆನ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.

* ಕೊಟ್ಟಿರುವ ಫಾರ್ಮನ್ನು ಸರಿಯಾಗಿ ಭರ್ತಿ ಮಾಡಿ, ಅರ್ಜಿ ಶುಲ್ಕದ ಪಾವತಿಯಿದ್ದರೆ (ವಿನಂತಿಸಿದ್ದರೆ ಮಾತ್ರ) ಆನ್ಲೈನ್ ನಲ್ಲಿ ಪಾವತಿಸಿ.

* ಈ ಅರ್ಜಿಯೊಂದಿಗೆ ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ. ಎಲ್ಲಾ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.

* ಅಂತಿಮವಾಗಿ, ಈ ಅರ್ಜಿಯನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 29-10-2024.

* ಅರ್ಜಿ ಸಲ್ಲಿಸಲು ಹಾಗೂ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 27-11-2024.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ