Delhi Police Head Constable Recruitment 2022: PUC ಪಾಸಾದವರಿಗೆ ದೆಹಲಿ ಪೊಲೀಸ್​ನಲ್ಲಿ ಉದ್ಯೋಗಾವಕಾಶ: ವೇತನ 81 ಸಾವಿರ ರೂ.

Delhi Police Head Constable Recruitment: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

Delhi Police Head Constable Recruitment 2022: PUC ಪಾಸಾದವರಿಗೆ ದೆಹಲಿ ಪೊಲೀಸ್​ನಲ್ಲಿ ಉದ್ಯೋಗಾವಕಾಶ: ವೇತನ 81 ಸಾವಿರ ರೂ.
Delhi Police Head Constable Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 19, 2022 | 9:00 AM

Delhi Police Head Constable Recruitment 2022: ಸರ್ಕಾರಿ ನೌಕರಿಯನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಕೇಂದ್ರ ಸರ್ಕಾರದ ಸಿಬ್ಬಂದಿ ಆಯ್ಕೆ ಆಯೋಗವು (SSC) ದೆಹಲಿ ಪೊಲೀಸ್‌ನಲ್ಲಿ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಸ್​ಎಸ್​ಸಿಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಒಟ್ಟು 835 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಪೈಕಿ 558 ಪುರುಷ ಅಭ್ಯರ್ಥಿಗಳು ಮತ್ತು 276 ಮಹಿಳಾ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಒಟ್ಟು ಹುದ್ದೆಗಳು (ಪುರುಷ)– 559 GEN/UR – 241 ಹುದ್ದೆಗಳು EWS – 56 ಹುದ್ದೆಗಳು OBC – 137 ಹುದ್ದೆಗಳು SC – 65 ಹುದ್ದೆಗಳು ST – 60 ಹುದ್ದೆಗಳು

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು ಹುದ್ದೆಗಳು (ಮಹಿಳೆ) – 276 GEN/UR – 119 ಹುದ್ದೆಗಳು EWS – 28 ಹುದ್ದೆಗಳು OBC – 67 ಹುದ್ದೆಗಳು SC – 32 ಹುದ್ದೆಗಳು ST – 30 ಹುದ್ದೆಗಳು

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: 18 ರಿಂದ 25 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 25,500 ರಿಂದ ರೂ. 81,100 ತಿಂಗಳ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಆಬ್ಜೆಕ್ಟಿವ್ ಟೈಪ್ ಟೆಸ್ಟ್ ದೈಹಿಕ ಪರೀಕ್ಷೆ ಕಂಪ್ಯೂಟರ್‌ನಲ್ಲಿ ಅರ್ಹತಾ ಟೈಪಿಂಗ್ ಪರೀಕ್ಷೆ ದೆಹಲಿ ಪೊಲೀಸರಿಂದ 25 ಅಂಕಗಳ ಕಂಪ್ಯೂಟರ್ (ಫಾರ್ಮ್ಯಾಟಿಂಗ್) ಪರೀಕ್ಷೆ ಇರಲಿದೆ.

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 16, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ