Delhi Police Head Constable Recruitment 2022: PUC ಪಾಸಾದವರಿಗೆ ದೆಹಲಿ ಪೊಲೀಸ್​ನಲ್ಲಿ ಉದ್ಯೋಗಾವಕಾಶ: ವೇತನ 81 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: May 19, 2022 | 9:00 AM

Delhi Police Head Constable Recruitment: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

Delhi Police Head Constable Recruitment 2022: PUC ಪಾಸಾದವರಿಗೆ ದೆಹಲಿ ಪೊಲೀಸ್​ನಲ್ಲಿ ಉದ್ಯೋಗಾವಕಾಶ: ವೇತನ 81 ಸಾವಿರ ರೂ.
Delhi Police Head Constable Recruitment 2022
Follow us on

Delhi Police Head Constable Recruitment 2022: ಸರ್ಕಾರಿ ನೌಕರಿಯನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಕೇಂದ್ರ ಸರ್ಕಾರದ ಸಿಬ್ಬಂದಿ ಆಯ್ಕೆ ಆಯೋಗವು (SSC) ದೆಹಲಿ ಪೊಲೀಸ್‌ನಲ್ಲಿ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಸ್​ಎಸ್​ಸಿಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:
ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಒಟ್ಟು 835 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಪೈಕಿ 558 ಪುರುಷ ಅಭ್ಯರ್ಥಿಗಳು ಮತ್ತು 276 ಮಹಿಳಾ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಒಟ್ಟು ಹುದ್ದೆಗಳು (ಪುರುಷ)– 559
GEN/UR – 241 ಹುದ್ದೆಗಳು
EWS – 56 ಹುದ್ದೆಗಳು
OBC – 137 ಹುದ್ದೆಗಳು
SC – 65 ಹುದ್ದೆಗಳು
ST – 60 ಹುದ್ದೆಗಳು

ಇದನ್ನೂ ಓದಿ
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು ಹುದ್ದೆಗಳು (ಮಹಿಳೆ) – 276
GEN/UR – 119 ಹುದ್ದೆಗಳು
EWS – 28 ಹುದ್ದೆಗಳು
OBC – 67 ಹುದ್ದೆಗಳು
SC – 32 ಹುದ್ದೆಗಳು
ST – 30 ಹುದ್ದೆಗಳು

ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
18 ರಿಂದ 25 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 25,500 ರಿಂದ ರೂ. 81,100 ತಿಂಗಳ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಆಬ್ಜೆಕ್ಟಿವ್ ಟೈಪ್ ಟೆಸ್ಟ್
ದೈಹಿಕ ಪರೀಕ್ಷೆ
ಕಂಪ್ಯೂಟರ್‌ನಲ್ಲಿ ಅರ್ಹತಾ ಟೈಪಿಂಗ್ ಪರೀಕ್ಷೆ
ದೆಹಲಿ ಪೊಲೀಸರಿಂದ 25 ಅಂಕಗಳ ಕಂಪ್ಯೂಟರ್ (ಫಾರ್ಮ್ಯಾಟಿಂಗ್) ಪರೀಕ್ಷೆ ಇರಲಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 16, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.