Dharwad Gram Panchayat Recruitment 2024 : ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಧಾರವಾಡ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಧಾರವಾಡ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಗಿಟ್ಟಿಸಿಕೊಳ್ಳಬಹುದು.
ಹುದ್ದೆಗಳ ವಿವರ
* ಇಲಾಖೆ ಹೆಸರು : ಧಾರವಾಡ ಗ್ರಾಮ ಪಂಚಾಯತ್
* ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
* ಒಟ್ಟು ಹುದ್ದೆಗಳು : 32
* ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್
* ಉದ್ಯೋಗ ಸ್ಥಳ : ಧಾರವಾಡ
* ವೇತನಶ್ರೇಣಿ : ಮಾಸಿಕ ರೂ 16,382.52
ವಿದ್ಯಾರ್ಹತೆ
* ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರವನ್ನು ಹೊಂದಿರಬೇಕು.
* ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ ಪ.ಜಾತಿ/ಪ.ಪಂಗಡ/ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
* ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಕಲಚೇತನ ಮತ್ತು ವಿಧವಾ ಮಹಿಳಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್‌ನಲ್ಲಿ 85 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕ
* ಪಿಡಬ್ಲ್ಯೂ ಡಿ ಅಭ್ಯರ್ಥಿಗಳು: ರೂ.100
* ಎಸ್ ಸಿ /ಎಸ್ ಟಿ /ಪ್ರವರ್ಗ-I/ ಎಕ್ಸ್ ಸರ್ವಿಸ್ ಮ್ಯಾನ್ ಅಭ್ಯರ್ಥಿಗಳು: ರೂ.200
* ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300
* ಸಾಮಾನ್ಯ ಅಭ್ಯರ್ಥಿಗಳು: ರೂ.500
ಆಯ್ಕೆ ವಿಧಾನ
* ಅಭ್ಯರ್ಥಿಗಳು ಪಿಯುಸಿಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇ.70 ರಷ್ಟು, ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದ ಅಭ್ಯರ್ಥಿಗೆ ಶೇ. 20 ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿದ ಅಭ್ಯರ್ಥಿಗೆ ಶೇ. 10 ರಷ್ಟು ಹೀಗೆ ಒಟ್ಟು ಶೇ. 100 ರಷ್ಟು ಅಂಕಗಳನ್ನು ಸೇರಿಸಿ ಮೆರಿಟ್ ಆಧಾರಿತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಲಾಗುತ್ತದೆ.
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 5-11-2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 4-ಡಿಸೆಂಬರ್-2024
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ