DHFWS Recruitment 2023: ಸರ್ಕಾರಿ ಉದ್ಯೋಗಾವಕಾಶ: ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
DHFWS Chitradurga Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಅಧಿಕೃತ ವೆಬ್ಸೈಟ್ chitradurga.nic.in ಗೆ ಭೇಟಿ ನೀಡಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
DHFWS Chitradurga Recruitment 2023: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು NHM ಯೋಜನೆಯಡಿಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 22 ನರ್ಸ್ಗಳನ್ನು ಆಯ್ಕೆ ಮಾಡಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಅಧಿಕೃತ ವೆಬ್ಸೈಟ್ chitradurga.nic.in ಗೆ ಭೇಟಿ ನೀಡಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಹುದ್ದೆಗಳ ಸಂಖ್ಯೆ: 22 ಉದ್ಯೋಗ ಸ್ಥಳ: ಚಿತ್ರದುರ್ಗ – ಕರ್ನಾಟಕ ಹುದ್ದೆಯ ಹೆಸರು: ಸ್ಟಾಫ್ ನರ್ಸ್
ಅರ್ಹತಾ ಮಾನದಂಡಗಳು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ GNM ನರ್ಸಿಂಗ್ ಪೂರ್ಣಗೊಳಿಸಿರಬೇಕು. ಜೊತೆಗೆ ಈ ಕ್ಷೇತ್ರದಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು.
ಇದನ್ನೂ ಓದಿ: Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ 45 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿಡಿ ಸಡಿಲಿಕೆಯನ್ನು ಕೂಡ ನೀಡಲಾಗಿದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 13,225 ರೂ. ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಲಿಖಿತ ಪರೀಕ್ಷೆ ಇರಲಿದ್ದು, ಇದಾದ ನಂತರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 22, 2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ:
District Project Management Unit (N.H.M), District Laboratory Premises, Back to District Hospital, Chitradurga
ಹೆಚ್ಚಿನ ವಿವರಗಳಿಗಾಗಿ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ: 9449843104
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.