DOT Recruitment 2023: ದೂರಸಂಪರ್ಕ ಇಲಾಖೆಯು ಡೆಪ್ಯುಟೇಶನ್ ಆಧಾರದ ಮೇಲೆ 270 ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಸಬ್ ಡಿವಿಶನಲ್ ಎಂಜಿನಿಯರ್(Sub Divisional Engineer) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಅಥವಾ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್ ಕಮ್ಯುನಿಕೇಶನ್/ಕಂಪ್ಯೂಟರ್ ಸೈನ್ಸ್/ಟೆಲಿ ಕಮ್ಯುನಿಕೇಶನ್/ಮಾಹಿತಿ ತಂತ್ರಜ್ಞಾನ/ಇನ್‌ಸ್ಟ್ರುಮೆಂಟೇಶನ್…ಇವುಗಳಲ್ಲಿ ಯಾವುದಾದರು ಒಂದು ವಿಷಯದಲ್ಲಿ ಪದವಿ ಮಾಡಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 47,600 ರಿಂದ 1,51,100 ರೂ.ವರೆಗೆ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ:
ADG-1 (A & HR), DGT HQ, Room No 212, 2nd Floor,
UIDAII Building, Behind Kali Mandir,
New Delhi – 110001
ಪ್ರಮುಖ ದಿನಾಂಕಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 22, 2023
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.