DRDO Recruitment 2022: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿದೆ ಉದ್ಯೋಗಾವಕಾಶ
DRDO DFRL Recruitment 2022: ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
DRDO DFRL Recruitment 2022: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)-ಡಿಫೆನ್ಸ್ ಫುಡ್ ರಿಸರ್ಚ್ ಲ್ಯಾಬೊರೇಟರಿ (ಡಿಎಫ್‌ಆರ್‌ಎಲ್) ಸ್ನಾತಕೋತ್ತರ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 3 ಮಾರ್ಚ್ 2022. DRDO ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಕೃತ ವೆಬ್ಸೈಟ್ rac.gov.in ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಗ್ರಾಜುಯೇಟ್ ಅಪ್ರೆಂಟಿಸ್ – 8 ಹುದ್ದೆಗಳು ಡಿಪ್ಲೋಮಾ ಅಪ್ರೆಂಟಿಸ್ – 9 ಹುದ್ದೆಗಳು
ವಿದ್ಯಾರ್ಹತೆ: ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗಾಗಿ ಆಹಾರ ತಂತ್ರಜ್ಞಾನ, ಬಿಎಸ್ಸಿ ಆಹಾರ ವಿಜ್ಞಾನ, ಬಯೋ-ಟೆಕ್ನಾಲಜಿ, ಬಯೋಇನ್‌ಫರ್ಮ್ಯಾಟಿಕ್ಸ್, ಬಯೋ-ಎಂಜಿನಿಯರಿಂಗ್, ಬಯೋಮೆಡಿಕಲ್ ಎಂಜಿನಿಯರಿಂಗ್, ಕೆಮಿಕಲ್ ಎಂಜಿನಿಯರಿಂಗ್, ಪಾಲಿಮರ್ ಎಂಜಿನಿಯರಿಂಗ್, ಪ್ಲಾಸ್ಟಿಕ್ ಎಂಜಿನಿಯರಿಂಗ್, ಪಾಲಿಮರ್ ಸೈನ್ಸ್‌ನಲ್ಲಿ ಬಿ.ಟೆಕ್ ಪದವಿ ಪಡೆದಿರುವ ಯುವಕರು ಅರ್ಜಿ ಸಲ್ಲಿಸಬಹುದು.
ಡಿಪ್ಲೊಮಾ ಅಪ್ರೆಂಟಿಸ್ – ಆಹಾರ ಮತ್ತು ಪೋಷಣೆ, ಹೋಟೆಲ್ ನಿರ್ವಹಣೆ, ಅಡುಗೆ ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಶನ್, ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ: ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗಿರುವ ಬಗ್ಗೆ ಮಾಹಿತಿಯನ್ನು ಆಫರ್ ಲೆಟರ್ ಮೂಲಕ ಅಥವಾ ನೋಂದಾಯಿತ ಇಮೇಲ್ ಐಡಿ ಮೂಲಕ ಮಾಹಿತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ? DRDO ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರದ rac.gov.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿಯ ಬಗ್ಗೆಗಿನ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?
ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ
ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್
(DRDO DFRL Recruitment 2022: Apply Online Apprentice 17 Post)