DRDO Recruitment 2022: ಡಿಆರ್​ಡಿಒ ನೇಮಕಾತಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

DRDO RAC Recruitment 2022: ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು DRDO ವೆಬ್‌ಸೈಟ್ rac.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

DRDO Recruitment 2022: ಡಿಆರ್​ಡಿಒ ನೇಮಕಾತಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
DRDO RAC Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 28, 2022 | 5:57 PM

DRDO RAC Recruitment 2022: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ವಿವಿಧ ವಿಭಾಗಗಳಲ್ಲಿ ವಿಜ್ಞಾನಿ ‘ಬಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. DRDO ಮತ್ತು ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA) ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ಈ ನೇಮಕಾತಿ ಮಾಡುತ್ತಿದೆ. ಅಧಿಸೂಚನೆಯ ಪ್ರಕಾರ, DRDO ನಲ್ಲಿ ಒಟ್ಟು 630 ಖಾಲಿ ಹುದ್ದೆಗಳಿವೆ. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು DRDO ವೆಬ್‌ಸೈಟ್ rac.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು:

  • ಡಿಆರ್‌ಡಿಒದಲ್ಲಿ ಸೈಂಟಿಸ್ಟ್ ಬಿ – 579 ಹುದ್ದೆಗಳು
  • ಡಿಎಸ್‌ಟಿಯಲ್ಲಿ ಸೈಂಟಿಸ್ಟ್ ಬಿ – 8 ಹುದ್ದೆಗಳು
  • ಎಡಿಎದಲ್ಲಿ ವಿಜ್ಞಾನಿ / ಎಂಜಿನಿಯರ್ ಬಿ – 43 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಇಂಜಿನಿಯರಿಂಗ್ ಸಂಬಂಧಿತ ವಿಷಯದಲ್ಲಿ ಪ್ರಥಮ ದರ್ಜೆ ಬ್ಯಾಚುಲರ್ ಪದವಿಯನ್ನು ಹೊಂದಿರಬೇಕು. ಅಲ್ಲದೆ, ನೀವು ಸಂಬಂಧಿತ ವಿಷಯದಲ್ಲಿ ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೆಯೇ ಐಐಟಿ ಅಥವಾ ಎನ್‌ಐಟಿಯಿಂದ ಪದವಿ ಪಡೆದಿದ್ದರೆ, ಒಟ್ಟು ಅಂಕಗಳು ಕನಿಷ್ಠ ಶೇಕಡಾ 80 ಆಗಿರಬೇಕು.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಗರಿಷ್ಠ ವಯೋಮಿತಿ: DRDO:

  • ಸಾಮಾನ್ಯ ಮತ್ತು EWS- 28 ವರ್ಷಗಳು
  • OBC- 31 ವರ್ಷಗಳು
  • SC & ST- 33 ವರ್ಷಗಳು

DST:

  • ಸಾಮಾನ್ಯ ಮತ್ತು EWS- 35 ವರ್ಷಗಳು
  • OBC- 38 ವರ್ಷಗಳು
  • SC & ST- 40 ವರ್ಷಗಳು

ಎಡಿಎ:

  • ಸಾಮಾನ್ಯ ಮತ್ತು EWS- 30 ವರ್ಷಗಳು
  • OBC- 33 ವರ್ಷಗಳು
  • SC & ST- 35 ವರ್ಷಗಳು

ಆಯ್ಕೆ ಪ್ರಕ್ರಿಯೆ: – ಗೇಟ್ ಸ್ಕೋರ್ ಮತ್ತು/ಅಥವಾ ಲಿಖಿತ ಪರೀಕ್ಷೆ – ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಅಂಕಗಳ ಆಧಾರದ ಮೇಲೆ ಡಿಆರ್‌ಡಿಒ ಶಿಸ್ತುವಾರು ಮತ್ತು ವರ್ಗವಾರು ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ಇದರಲ್ಲಿ ಲಿಖಿತ ಪರೀಕ್ಷೆಗೆ ಶೇಕಡಾ 80 ಮತ್ತು ವೈಯಕ್ತಿಕ ಸಂದರ್ಶನಕ್ಕೆ ಶೇಕಡಾ 20 ರಷ್ಟು ಮಾರ್ಕ್ಸ್​ ನೀಡಲಾಗುತ್ತದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 5:56 pm, Tue, 28 June 22

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ