DRDO Recruitment 2022: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಜೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು DRDO ನ ಅಧಿಕೃತ ವೆಬ್‌ಸೈಟ್ drdo.gov.in ಗೆ ಭೇಟಿ ನೀಡುವ ಮೂಲಕ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 15, 2022. ಒಟ್ಟು 8 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, 7 ಜೂನಿಯರ್ ರಿಸರ್ಚ್ ಫೆಲೋ ಮತ್ತು 1 ರಿಸರ್ಚ್ ಅಸೋಸಿಯೇಟ್ ಹುದ್ದೆಗಳ ಭರ್ತಿ ನಡೆಯಲಿದೆ.
DRDO Recruitment 2022: ವಿದ್ಯಾರ್ಹತೆ:
ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಅಥವಾ ಪಿಜಿ ಪದವಿ ಹೊಂದಿರುವ ಅಭ್ಯರ್ಥಿಗಳು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹಾಗೆಯೇ JRF ಗೆ, NET ಪಾಸ್ ಅಥವಾ ಪ್ರಥಮ ವಿಭಾಗದಿಂದ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿಯ ಅಧಿಸೂಚನೆಯಲ್ಲಿ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪರಿಶೀಲಿಸಿ.
DRDO Recruitment 2022: ವಯೋಮಿತಿ:
28 ವರ್ಷ ವಯಸ್ಸಿನ ಅಭ್ಯರ್ಥಿಗಳು JRF ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಸೋಸಿಯೇಟ್ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 35 ವರ್ಷ ಎಂದು ನಿಗದಿಪಡಿಸಲಾಗಿದೆ.
DRDO Recruitment 2022: ಆಯ್ಕೆ ಪ್ರಕ್ರಿಯೆ:
ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇದಾದ ಬಳಿಕ ದಾಖಲೆಗಳ ಪರಿಶೀಲನೆ ನಡೆಯಲಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು