ECIL Recruitment 2022: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL) ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಮೆಕ್ಯಾನಿಕ್, ಫಿಟ್ಟರ್ ಮತ್ತು ಟರ್ನರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ECIL ನ ವೆಬ್‌ಸೈಟ್ ecil.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಮತ್ತಷ್ಟು ವಿವರಗಳು ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಎಲೆಕ್ಟ್ರಿಷಿಯನ್ – 3 ಹುದ್ದೆಗಳು
ಮೆಷಿನಿಸ್ಟ್ – 10 ಹುದ್ದೆಗಳು
ಎಲೆಕ್ಟ್ರಾನಿಕ್ ಮೆಕ್ಯಾನಿಕ್/ಆರ್&ಟಿವಿ – 11 ಹುದ್ದೆಗಳು
ಫಿಟ್ಟರ್ – 12 ಹುದ್ದೆಗಳು
ಟರ್ನರ್ – 4 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು 10ನೇ ತರಗತಿ ಅಥವಾ ಅದರ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು.
ವಯೋಮಿತಿ:
28 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 25, 2022
ಹೇಗಿರಲಿದೆ ಆಯ್ಕೆ ಪ್ರಕ್ರಿಯೆ?
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಅಥವಾ ಸಂಬಂಧಿತ ವಿಷಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.