AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Recruitment: ತುಮಕೂರು ಜಿಲ್ಲೆಯಲ್ಲಿ ಪುರುಷ ಡಿಪ್ಲೊಮಾದಾರರಿಗೆ ಉದ್ಯೋಗಕ್ಕಾಗಿ ನೇರ ಸಂದರ್ಶನ

ನಗರದ ಚರ್ಚ್ ಸರ್ಕಲ್ ಹತ್ತಿರವಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಫೆಬ್ರವರಿ 4 ರ ಬೆಳಗ್ಗೆ 10.30 ಗಂಟೆಗೆ ನೇರ ಸಂದರ್ಶನ ನಡೆಯಲಿದೆ. Diploma (mechanical & automobile) & BE ಪಾಸಾದ ಹಾಗೂ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಜೊತೆಗೆ ಸಂದರ್ಶನದಲ್ಲಿ ಭಾಗವಹಿಸಹುದು.

Recruitment: ತುಮಕೂರು ಜಿಲ್ಲೆಯಲ್ಲಿ ಪುರುಷ ಡಿಪ್ಲೊಮಾದಾರರಿಗೆ ಉದ್ಯೋಗಕ್ಕಾಗಿ ನೇರ ಸಂದರ್ಶನ
ತುಮಕೂರು: ಪುರುಷ ಡಿಪ್ಲೊಮಾದಾರರಿಗೆ ಉದ್ಯೋಗಕ್ಕಾಗಿ ನೇರ ಸಂದರ್ಶನ
TV9 Web
| Updated By: ಸಾಧು ಶ್ರೀನಾಥ್​|

Updated on:Feb 03, 2022 | 8:59 AM

Share

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (tumkur district employment exchange) ಮತ್ತು Mann & Hummel filter pvt ltd ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ಕಲ್ಪಿಸುವ ಸಂಬಂಧ ಪುರುಷ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ನಗರದ ಚರ್ಚ್ ಸರ್ಕಲ್ ಹತ್ತಿರವಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಫೆಬ್ರವರಿ 4 ರ ಬೆಳಗ್ಗೆ 10.30 ಗಂಟೆಗೆ ನೇರ ಸಂದರ್ಶನ ನಡೆಯಲಿದೆ. Diploma (mechanical & automobile) & BE( mechanical & automobile) ಪಾಸಾದ ಹಾಗೂ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಜೊತೆಗೆ ಸಂದರ್ಶನದಲ್ಲಿ ಭಾಗವಹಿಸಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278 488 ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ ನಾಳೆಯಿಂದ:

ತುಮಕೂರು: ಬೆಸ್ಕಾಂ ನಗರ ಉಪವಿಭಾಗದ-1 ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿರುವುದರಿಂದ ಫೆಬ್ರವರಿ 4 ರಿಂದ 15 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಶ್ರೀರಾಮನಗರ, ಹೊರಪೇಟೆ, ವಿವೇಕಾನಂದ ರಸ್ತೆ, ಕೆಆರ್ ಬಡಾವಣೆ, ಬಾರ್ ಲೈನ್ ಎಮ್‌ ಜಿ ರಸ್ತೆ, ಅಶೋಕ ರಸ್ತೆ, ಕೋತಿ ತೋಪು, ಪಾಂಡುರಂಗ ನಗರ, ಜಾಮೀಯಾ ಮಸೀದಿ, ಅಗ್ರಹಾರ, ಕ್ರಿಶ್ಚಿಯನ್ ಸ್ಟ್ರೀಟ್, ಡಿಸಿ ಕಚೇರಿ ಕೋರ್ಟ್ ಆವರಣ, ವಿದ್ಯಾನಗರ, ವಾಲ್ಮೀಕಿ ನಗರ, ಬಟವಾಡಿ, ಕೈಗಾರಿಕಾ ಪ್ರದೇಶ, ಹೊಸಹಳ್ಳಿ, ಹಾರೋನ ಹಳ್ಳಿ, ನರಸಾಪುರ, ಕುಪ್ಪೂರು, ಕಾಳಮ್ಮನ ಪಾಳ್ಯ, ಮರಿಹುಚ್ಚಯ್ಯನ ಪಾಳ್ಯ, ಬೆಳಗುಂಬ, ಕುಂದೂರು, ಭಾಗ್ಯನಗರ, ಜ್ಯೋತಿಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಎಂಜಿನಿಯರ್ ಮಂಜುನಾಥ್ ಮನವಿ ಮಾಡಿದ್ದಾರೆ.

ಹಣಕಾಸು ಸಚಿವಾಲಯದಲ್ಲಿ 590 ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಣಕಾಸು ಸಚಿವಾಲಯವು ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ (Assistant Accounts Officer) ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸುವ ಮೂಲಕ ಅಥವಾ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ಉದ್ಯೋಗ ಸುದ್ದಿಗಳಲ್ಲಿ ಜಾಹೀರಾತು ಪ್ರಕಟವಾದ ದಿನಾಂಕದಿಂದ 45 ದಿನಗಳ ಒಳಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಲಾಗಿದೆ. ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 590 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಡೆಪ್ಯುಟೇಶನ್ ಅವಧಿಯು ಆರಂಭದಲ್ಲಿ 3 ವರ್ಷಗಳವರೆಗೆ ಇರುತ್ತದೆ. ಸಾರ್ವಜನಿಕ ಸೇವೆಗಳ ಅಗತ್ಯತೆಗಳಲ್ಲಿ ಅಗತ್ಯವಿರುವಂತೆ ಅದನ್ನು ವಿಸ್ತರಿಸಬಹುದು ಅಥವಾ ಮೊಟಕುಗೊಳಿಸಬಹುದು. ಬೆಂಗಳೂರು, ಮಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯ ಹಾಗೂ ದೇಶದ ವಿವಿಧ ನಗರಗಳಲ್ಲಿ ಹುದ್ದೆಗಳು ಖಾಲಿ ಇವೆ. ವೇತನ ಶ್ರೇಣಿ 7ನೇ ಸಿಪಿಸಿ ಅನ್ವಯ 8 ಅಥವಾ 9ನೇ ಹಂತದಲ್ಲಿರಲಿದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳ ಕುರಿತು ಮಾಹಿತಿ ಇಲ್ಲಿದೆ.

ಅರ್ಹತೆಯ ಮಾನದಂಡ: ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು AAO (Civil)/ SAS ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಎಸ್‌ಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು- ತಮ್ಮ ಬಡ್ತಿಗಾಗಿ ಕಾಯುತ್ತಿರುವವರು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿಯ ಸ್ವೀಕೃತಿಯ ಅಂತಿಮ ದಿನಾಂಕಕ್ಕೆ ಅನ್ವಯವಾಗುವಂತೆ ಗರಿಷ್ಠ ವಯಸ್ಸಿನ ಮಿತಿಯು 56 ವರ್ಷಕ್ಕಿಂತ ಕಡಿಮೆ ಇರಬೇಕು.

ಭರ್ತಿ ಮಾಡಿದ ಅರ್ಜಿಯನ್ನು ಕಳುಹಿಸುವ ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಇಲ್ಲಿಗೆ ಕಳುಹಿಸಬೇಕು: Senior Accounts Officer (HR-3), O/o Controller General of Accounts, Department of Expenditure, Ministry of Finance, Room No 210, 2nd Floor, Mahalekha Niyantrak Bhawan, Block GPO Complex, INA, Delhi-110023

ಇಮೇಲ್ ವಿಳಾಸ: groupbsec-cga@gov.in

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ- http://davp.nic.in/WriteReadData/ADS/eng_15101_2_2122b.pdf

Published On - 8:57 am, Thu, 3 February 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?