ESIC Recruitment 2022: ರಾಜ್ಯ ವಿಮಾ ನಿಗಮದ ಹುದ್ದೆಗಳಿಗೆ ಅರ್ಜಿ ಆಹ್ವಾನ
ESIC Karnataka Recruitment 2022: ಈ ಹುದ್ದೆಗಳಿಗೆ ನೇರ ಸಂದರ್ಶನಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 11 ರಂದು ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದು.
ESIC Karnataka Recruitment 2022: ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದ (ESIC Karnataka) 9 ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 11 ರಂದು ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು: ಸೀನಿಯರ್ ರೆಸಿಡೆಂಟ್- 9 ಹುದ್ದೆಗಳು
ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯಗಳಿಂದ ಎಮರ್ಜೆನ್ಸಿ ಮೆಡಿಸಿನ್ /ಅನೆಸ್ತೇಶಿಯಾ/ರೆಸ್ಪಿರೇಟರಿ ಮೆಡಿಸಿನ್, ಆರ್ಥೋಪೆಡಿಕ್ಸ್, ಜನರಲ್ ಸರ್ಜರಿಯಲ್ಲಿ ಎಂಎಸ್, ಡಿಎನ್ಬಿ ನಲ್ಲಿ ಎಂಡಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಸಂದರ್ಶದಲ್ಲಿ ಭಾಗವಹಿಸಬಹುದು.
ವಯೋಮಿತಿ: ಗರಿಷ್ಠ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಈ ನೇಮಕಾತಿಯ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಮಾಸಿಕ ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/-ರೂಗಳ ವರೆಗೆ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಕಾರ್ಮಿಕರ ರಾಜ್ಯ ವಿಮಾ ನಿಗಮದ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನದ ದಾಖಲೆಗಳು: ನೇರ ಸಂದರ್ಶನಕ್ಕೆ ತೆರಳುವ ಅಭ್ಯರ್ಥಿಗಳು 2 ಪಾಸ್ ಪೋರ್ಟ್ ಸೈಜ್ ಫೋಟೋ, ವಯಸ್ಸಿನ ದೃಢೀಕರಣ, ಶೈಕ್ಷಣಿಕ ದಾಖಲೆಗಳನ್ನು ಹೊಂದಿರಬೇಕು. ಹಾಗೆಯೇ ಜಾತಿ ಮತ್ತು ಮೀಸಲಾತಿ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ಹೋಗಬೇಕು.
ಪ್ರಮುಖ ದಿನಾಂಕ: ನೇರ ಸಂದರ್ಶನದ ದಿನಾಂಕ- ಅಕ್ಟೋಬರ್ 11, 2022
ಸಂದರ್ಶನ ನಡೆಯುವ ಸ್ಥಳ/ವಿಳಾಸ: Academic Block, ESIC MC and PGIMSR, Rajaji Nagar, Bangalore, Karnataka
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.