ESIC Recruitment 2022: ರಾಜ್ಯ ವಿಮಾ ನಿಗಮದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ESIC Recruitment 2022: ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಧಿಸೂಚನೆಯಲ್ಲಿ ನೀಡಲಾದ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಬೇಕು.

ESIC Recruitment 2022: ರಾಜ್ಯ ವಿಮಾ ನಿಗಮದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ESIC Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 25, 2022 | 4:48 PM

ESIC Recruitment 2022: ಉದ್ಯೋಗಿಗಳ ರಾಜ್ಯ ವಿಮಾ ನಿಗಮವು (ESIC) ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಧಿಸೂಚನೆಯಲ್ಲಿ ನೀಡಲಾದ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಬೇಕು. ಇದಕ್ಕಾಗಿ ಅಭ್ಯರ್ಥಿಗಳಿಗೆ ಜುಲೈ 18, 2022 ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಈ ನೇಮಕಾತಿಯ ಮೂಲಕ ಒಟ್ಟು 491 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಎಂಡಿ/ಎಂಎಸ್ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆಯ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ: ಈ ಹುದ್ದೆಗಳಿಗೆ 40 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ 500 ರೂ. ನಿಗದಿಪಡಿಸಲಾಗಿದೆ. ಆದಾಗ್ಯೂ, SC, ST ವರ್ಗದ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ವೇತನ: ಕನಿಷ್ಠ ವೇತನ: ರೂ.67,700/- ಗರಿಷ್ಠ ವೇತನ: ರೂ.2,08,700/-

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 18, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ನೇಮಕಾತಿಯ ಅರ್ಜಿಯನ್ನು ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಡೌನ್​ಲೋಡ್ ಮಾಡಿ. ಆ ಬಳಿಕ ಅರ್ಜಿಯನ್ನು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಕಳುಹಿಸಬೇಕಾದ ವಿಳಾಸ: Regional Director, ESI Corporation, Panchdeep Bhawan, Sector-16, Near Laxshmi Narayan Mandir, Faridabad-121002, Haryana

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.