FCI Recruitment 2022: ಡಿಗ್ರಿ ಪಾಸಾದವರಿಗೆ ಭಾರತೀಯ ಆಹಾರ ನಿಗಮದಲ್ಲಿದೆ ಉದ್ಯೋಗಾವಕಾಶ

FCI Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಆಹಾರ ನಿಗಮದ ಅಧಿಕೃತ ವೆಬ್‌ಸೈಟ್ fci.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

FCI Recruitment 2022: ಡಿಗ್ರಿ ಪಾಸಾದವರಿಗೆ ಭಾರತೀಯ ಆಹಾರ ನಿಗಮದಲ್ಲಿದೆ ಉದ್ಯೋಗಾವಕಾಶ
FCI Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 29, 2022 | 3:22 PM

FCI Recruitment 2022: ಭಾರತೀಯ ಆಹಾರ ನಿಗಮ (FCI) ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಎಫ್​ಸಿಐನ ವಿವಿಧ ವಲಯಗಳಲ್ಲಿನ ಮ್ಯಾನೇಜರ್ (ಜನರಲ್ / ಡಿಪೋ / ಅಕೌಂಟ್ / ಟೆಕ್ನಿಕಲ್ / ಸಿವಿಲ್ ಇಂಜಿನಿಯರಿಂಗ್ / ಎಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್) ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಆಹಾರ ನಿಗಮದ ಅಧಿಕೃತ ವೆಬ್‌ಸೈಟ್ fci.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳು- 113

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಭಾಗೀಯವಾರು ಹುದ್ದೆಗಳು:

  • ಉತ್ತರ ವಲಯ: 38 ಹುದ್ದೆಗಳು
  • ದಕ್ಷಿಣ ವಲಯ: 16 ಹುದ್ದೆಗಳು
  • ಪಶ್ಚಿಮ ವಲಯ: 20 ಹುದ್ದೆಗಳು
  • ಪೂರ್ವ ವಲಯ: 21 ಹುದ್ದೆಗಳು
  • ಈಶಾನ್ಯ ವಲಯ: 18 ಹುದ್ದೆಗಳು

ಅರ್ಹತಾ ಮಾನದಂಡ:

ಮ್ಯಾನೇಜರ್ (ಸಾಮಾನ್ಯ) ಹುದ್ದೆ: ಕನಿಷ್ಠ 60% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ  ಪದವಿ ಅಥವಾ CA/ICWA/CS ಮಾಡಿರಬೇಕು. ಇನ್ನು SC/ST/ PwBD ಅಭ್ಯರ್ಥಿಗಳಿಗೆ ಕನಿಷ್ಠ ಅಂಕಗಳಲ್ಲಿ ವಿನಾಯಿತಿ ನೀಡಲಾಗಿದ್ದು, ಅದರಂತೆ 55% ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮ್ಯಾನೇಜರ್ (ಡಿಪೋ) ಹುದ್ದೆ: ಕನಿಷ್ಠ 60% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ CA/ICWA/CS ಮಾಡಿಬೇಕು. ಇನ್ನು 55% ಹೊಂದಿರುವ SC/ST/ PwBD ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 28 ವರ್ಷಗಳಿಗಿಂತ ಹೆಚ್ಚಿರಬಾರದು. ಇದಾಗ್ಯೂ ಕೆಲ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಶುಲ್ಕವಾಗಿ ರೂ 800 ಪಾವತಿಸಬೇಕಾಗುತ್ತದೆ. ಇನ್ನು SC / ST / PWBD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 26, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು Fci.gov.in ಮೂಲಕ ಆನ್‌ಲೈನ್‌ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 3:21 pm, Mon, 29 August 22

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ