FCI Recruitment 2022: 8ನೇ ತರಗತಿ ಪಾಸಾದವರಿಗೆ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿದೆ ಉದ್ಯೋಗ

| Updated By: ಝಾಹಿರ್ ಯೂಸುಫ್

Updated on: May 11, 2022 | 9:53 PM

FCI Recruitment 2022: ಈ ಹುದ್ದೆಗಳಿಗೆ 8ನೇ/10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಹಾಗೆಯೇ ಪದವೀಧರರಾಗಿರುವ ಅಭ್ಯರ್ಥಿಗಳೂ ಸಹ ಅರ್ಜಿ ಸಲ್ಲಿಸಬಹುದು.

FCI Recruitment 2022: 8ನೇ ತರಗತಿ ಪಾಸಾದವರಿಗೆ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿದೆ ಉದ್ಯೋಗ
FCI Recruitment 2022
Follow us on

FCI Recruitment 2022: ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ (FCI) ಅತ್ಯುತ್ತಮ ಉದ್ಯೋಗಾವಕಾಶಗಳಿವೆ. FCI ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 4710 ಖಾಲಿ ಹುದ್ದೆಗಳಿದ್ದು, ಈ ಪೋಸ್ಟ್​ಗಳಿಗೆ ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಎಫ್‌ಸಿಐ ಅಧಿಕೃತ ವೆಬ್‌ಸೈಟ್‌ fci.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ವರ್ಗ II – 35 ಹುದ್ದೆಗಳು
ವರ್ಗ III – 2521 ಹುದ್ದೆಗಳು
ವರ್ಗ IV (ಸೆಕ್ಯುರಿಟಿ) – 2154 ಹುದ್ದೆಗಳು

ಇದನ್ನೂ ಓದಿ
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ 8ನೇ/10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಹಾಗೆಯೇ ಪದವೀಧರರಾಗಿರುವ ಅಭ್ಯರ್ಥಿಗಳಿಗೂ ಅವರ ವಿದ್ಯಾರ್ಹತೆಗೆ ತಕ್ಕಂತಹ ಹುದ್ದೆಗಳೂ ಇದೆ.

ಆಯ್ಕೆ ಮಾನದಂಡ:
ಲಿಖಿತ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಹಾಗೆಯೇ ವರ್ಗ IV ರ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 25 ವರ್ಷ ಎಂದು ನಿಗದಿಪಡಿಸಲಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.