FCI Recruitment 2023: ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Mar 23, 2023 | 2:26 PM

FCI Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು FCI ನ ಅಧಿಕೃತ ವೆಬ್‌ಸೈಟ್ fci.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

FCI Recruitment 2023: ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
FCI Recruitment 2023
Follow us on

FCI Recruitment 2023: ಭಾರತೀಯ ಆಹಾರ ನಿಗಮದಲ್ಲಿ (FCI) ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. FCI ಸಹಾಯಕ ಜನರಲ್ ಮ್ಯಾನೇಜರ್ (AE) ಮತ್ತು ಸಹಾಯಕ ಜನರಲ್ ಮ್ಯಾನೇಜರ್ (EM) ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು FCI ನ ಅಧಿಕೃತ ವೆಬ್‌ಸೈಟ್ fci.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗಾಗಿ ಇರಬೇಕಾದ ಅರ್ಹತೆಗಳೇನು? ಈ ಹುದ್ದೆಗಳಿಗೆ ಆಯ್ಕೆಯಾದರೆ ಸಿಗುವ ವೇತನ ಎಷ್ಟು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಎಂಬಿತ್ಯಾದಿ ಪ್ರಶ್ನೆಗಳಿಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ, ಸಹಾಯಕ ಜನರಲ್ ಮ್ಯಾನೇಜರ್ (AE) ವಿಭಾಗದ 26 ಹುದ್ದೆಗಳನ್ನು ಮತ್ತು ಸಹಾಯಕ ಜನರಲ್ ಮ್ಯಾನೇಜರ್ (EM) ವಿಭಾಗದ 20 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅರ್ಹತಾ ಮಾನದಂಡಗಳು:

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಎಇ): ಅಭ್ಯರ್ಥಿಗಳು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಮಾನ ಅರ್ಹತೆಯನ್ನು ಹೊಂದಿರಬೇಕು. E-3 ಅಥವಾ L-11 ದರ್ಜೆಯಲ್ಲಿ ಹುದ್ದೆಯನ್ನು ಹೊಂದಿರುವುದು ಅಥವಾ ಸಹಾಯಕ ಇಂಜಿನಿಯರ್ ಹುದ್ದೆಗಳಲ್ಲಿ ಕನಿಷ್ಠ 05 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕಾಗುತ್ತದೆ.

ಸಹಾಯಕ ಜನರಲ್ ಮ್ಯಾನೇಜರ್ (EM): ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ / ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ಅದಕ್ಕೆ ಸಮಾನವಾದ ಪದವಿಯನ್ನು ಹೊಂದಿರಬೇಕು. E-3 ಅಥವಾ L-11 ದರ್ಜೆಯಲ್ಲಿ ಹುದ್ದೆಯನ್ನು ಅಥವಾ ಸಹಾಯಕ ಇಂಜಿನಿಯರ್ ಹುದ್ದೆಗಳಲ್ಲಿ ಕನಿಷ್ಠ 05 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ:

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಎಇ) ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಇಎಂ) ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ 60,000- 1,80,000 ವೇತನವನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಏಪ್ರಿಲ್ 3, 2023

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.