FCI Recruitment 2023: ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 1.80 ಲಕ್ಷ ರೂ.

FCI Recruitment 2023: ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (EM)- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಎಂಜಿನಿಯರಿಂಗ್​/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪದವಿಯನ್ನು ಹೊಂದಿರಬೇಕು.

FCI Recruitment 2023: ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 1.80 ಲಕ್ಷ ರೂ.
FCI Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 06, 2023 | 9:01 PM

FCI Recruitment 2023: ಭಾರತೀಯ ಆಹಾರ ನಿಗಮದ (FCI) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 46 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್ ಹಾಗೂ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (CE)- 26 ಹುದ್ದೆಗಳು
  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (EM)- 20 ಹುದ್ದೆಗಳು

ಅರ್ಹತಾ ಮಾನದಂಡಗಳು:

  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (CE)- ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (EM)- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಎಂಜಿನಿಯರಿಂಗ್​/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪದವಿಯನ್ನು ಹೊಂದಿರಬೇಕು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 60,000 ರಿಂದ 1,80,000 ರೂ. ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಮೂಲಕ ಸೂಕ್ತ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 01/04/2023

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

Deputy General Manager(Estt-I), Food Corporation of India, Headquarters, 16-20 Barakhamba Lane, New Delhi-110001

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.