ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ಮುಖ್ಯ ವ್ಯವಸ್ಥಾಪಕ ಮತ್ತು ಹಿರಿಯ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಕಂಪನಿಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು gailonline.com ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಒಟ್ಟು ಹುದ್ದೆಗಳ ಸಂಖ್ಯೆ ಮತ್ತು ವಿವರ:
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ 9 ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ.
ಮುಖ್ಯ ವ್ಯವಸ್ಥಾಪಕರು: 2 ಹುದ್ದೆಗಳು
ಹಿರಿಯ ಅಧಿಕಾರಿ: 7 ಹುದ್ದೆಗಳು
ವಿದ್ಯಾರ್ಹತೆ:
ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನರಲ್ ಮೆಡಿಸಿನ್‌ನಲ್ಲಿ MD / DNB ಜೊತೆಗೆ MBBS ಮಾಡಿರಬೇಕು.
ಇನ್ನು ಹಿರಿಯ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಂಬಿಬಿಎಸ್ ಪದವಿ ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ:
GAIL ಇಂಡಿಯಾ ಆಯ್ಕೆ ಪ್ರಕ್ರಿಯೆಯು ಆಯ್ಕೆ ಸಮಿತಿಯ ಮುಂದೆ ಸಂದರ್ಶನವನ್ನು ಒಳಗೊಂಡಿರುತ್ತದೆ. ಅಂದರೆ ಇಂಟರ್ವ್ಯೂನಲ್ಲಿ ಗ್ರೂಪ್ ಡಿಸ್ಕಸ್ ಬಳಿಕ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿ ಮತ್ತು OBC ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕಾಗುತ್ತದೆ. ಇನ್ನು SC/ ST/ PwBD ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು gailonline.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 20, 2022.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್
ಇದನ್ನೂ ಓದಿ: Sachin Tendulkar: ಆಲ್ ಟೈಮ್ ಬೆಸ್ಟ್ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ
ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್
ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!
(GAIL India Recruitment 2022 )