GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Feb 27, 2022 | 8:15 PM

GAIL recruitment 2022: GATE-2022 ಅಂಕಗಳ ಆಧಾರದ ಮೇಲೆ ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನಕ್ಕಾಗಿ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
GAIL Recruitment 2022
Follow us on

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದಲ್ಲಿನ (GAIL) ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು GAIL ನ ಅಧಿಕೃತ ವೆಬ್‌ಸೈಟ್ gailonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 16 ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹೀಗಿದೆ…

GAIL Recruitment 2022: ಹುದ್ದೆಗಳ ವಿವರಗಳು:
ಎಕ್ಸಿಕ್ಯೂಟಿವ್ ಟ್ರೈನಿ (ಇನ್‌ಸ್ಟ್ರುಮೆಂಟೇಶನ್) – 18 ಹುದ್ದೆಗಳು
ಎಕ್ಸಿಕ್ಯುಟಿವ್ ಟ್ರೈನಿ (ಮೆಕ್ಯಾನಿಕಲ್)-15 ಹುದ್ದೆಗಳು
ಎಕ್ಸಿಕ್ಯೂಟಿವ್ ಟ್ರೈನಿ (ಎಲೆಕ್ಟ್ರಿಕಲ್) – 15 ಹುದ್ದೆಗಳು

GAIL Recruitment 2022: ಅರ್ಹತಾ ಮಾನದಂಡಗಳು:
ಎಕ್ಸಿಕ್ಯುಟಿವ್ ಟ್ರೈನಿ (ಇನ್‌ಸ್ಟ್ರುಮೆಂಟೇಶನ್) – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಇನ್‌ಸ್ಟ್ರುಮೆಂಟೇಶನ್/ ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಿಕಲ್ ಮತ್ತು ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಬ್ಯಾಚುಲರ್ ಪದವಿಯನ್ನು ಪಡೆದಿರಬೇಕು.
ಎಕ್ಸಿಕ್ಯುಟಿವ್ ಟ್ರೈನಿ (ಮೆಕ್ಯಾನಿಕಲ್) – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಮೆಕ್ಯಾನಿಕಲ್ / ಪ್ರೊಡಕ್ಷನ್ / ಪ್ರೊಡಕ್ಷನ್ & ಇಂಡಸ್ಟ್ರಿಯಲ್ / ಮ್ಯಾನುಫ್ಯಾಕ್ಚರಿಂಗ್ / ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್‌ನಲ್ಲಿ ಎಂಜಿನಿಯರಿಂಗ್ / ತಂತ್ರಜ್ಞಾನದಲ್ಲಿ ಬ್ಯಾಚುಲರ್ ಪದವಿಯನ್ನು ಹೊಂದಿರಬೇಕು.
ಎಕ್ಸಿಕ್ಯುಟಿವ್ ಟ್ರೈನಿ (ಎಲೆಕ್ಟ್ರಿಕಲ್) – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.

GAIL Recruitment 2022: ವಯೋಮಿತಿ:
ಈ ಹುದ್ದೆಗಳಿಗೆ 26 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

GAIL Recruitment 2022: ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

GAIL Recruitment 2022: ಆಯ್ಕೆ ಪ್ರಕ್ರಿಯೆ:
GATE-2022 ಅಂಕಗಳ ಆಧಾರದ ಮೇಲೆ ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನಕ್ಕಾಗಿ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

GAIL Recruitment 2022: ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16 ಮಾರ್ಚ್ 2022

GAIL Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಅನ್ನು ಮಾಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022 format explained: 2 ಗುಂಪು, 70 ಪಂದ್ಯಗಳು: ಹೇಗಿರಲಿದೆ IPL 2022 ಟೂರ್ನಿ

ಇದನ್ನೂ ಓದಿ: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಈ ಆಟಗಾರರು ಅಲಭ್ಯ

ಇದನ್ನೂ ಓದಿ: IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!

(GAIL recruitment 2022: Application invites for executive trainees)