ಗುಡ್​ನ್ಯೂಸ್: ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸುವುದಕ್ಕೆ ವಿಶೇಷ ಅವಕಾಶದ ಜೊತೆಗೆ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೂ ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ನಿರ್ಧಾರ ಮಾಡಿದೆ.

ಗುಡ್​ನ್ಯೂಸ್: ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ
ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 26, 2024 | 4:04 PM

ಬೆಂಗಳೂರು, ಜು.26: 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ನಿರ್ಧಾರ ಮಾಡಲಾಗಿದೆ. ಜೊತೆಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸುವುದಕ್ಕೆ ವಿಶೇಷ ಅವಕಾಶ ನೀಡಲಾಗುವುದು ಎಂದು ಇಂದು (ಶುಕ್ರವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್​ಕೆ ಪಾಟೀಲ್ ಹೇಳಿದ್ದಾರೆ.

ಇನ್ನು ಕರ್ನಾಟಕದಲ್ಲಿ ಖಾಲಿ ಇರುವ ಗೆಜೆಟೆಡ್‌ ಪ್ರೊಬೇಷನರ್ಸ್‌ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್‌ ಸೇರಿದಂತೆ ವಿವಿಧ ಕಾರಣಗಳಿಗೆ ನೇಮಕಾತಿ ವಿಳಂಬವಾಗಿತ್ತು. ಈ ಬಾರಿ 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿಗೆ ಗರಿಷ್ಠ 3 ವರ್ಷ ವಯೋಮಿತಿ ಸಡಿಲಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ:Karnataka Anganwadi Jobs: ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ನೇಮಕಾತಿ – ಆನ್​ಲೈನ್​​ನಲ್ಲಿ ಅರ್ಜಿ ಸಲ್ಲಿಸಿ

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಆಕಾಂಕ್ಷಿಗಳಾಗಿರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಬದಲಾಗಿ 38 ವರ್ಷದವರೆಗೆ, ಒಬಿಸಿ ವರ್ಗದವರಿಗೆ 38 ವರ್ಷ ಬದಲಿಗೆ 41 ವರ್ಷದವರೆಗೆ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದ ಬದಲಿಗೆ 43 ವರ್ಷದ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆದರೆ ಈ ನಿಯಮವು ಈ ಬಾರಿಗೆ ಮಾತ್ರ ಅನ್ವಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us