AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Fellowship 2026: ಗೂಗಲ್​ನಿಂದ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ; 10 ಲಕ್ಷ ರೂ. ಸ್ಟೈಫಂಡ್ ಪಡೆಯುವ ಅವಕಾಶ

2026ರ ಗೂಗಲ್ ಫೆಲೋಶಿಪ್ ಪ್ರೋಗ್ರಾಂ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗೆ ಸ್ಟೈಫಂಡ್‌ನೊಂದಿಗೆ ಉತ್ತಮ ಅವಕಾಶ ನೀಡಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಪದವಿ, ಸ್ನಾತಕೋತ್ತರ ಅಥವಾ ಪಿಎಚ್‌ಡಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಇಂಟರ್ನೆಟ್ ತಂತ್ರಜ್ಞಾನ ಮತ್ತು ನೀತಿಗಳಲ್ಲಿ ಆಸಕ್ತಿ ಹೊಂದಿರುವವರು ಏಪ್ರಿಲ್ 9 ರೊಳಗೆ ಅರ್ಜಿ ಸಲ್ಲಿಸಿ, ಗೂಗಲ್‌ನೊಂದಿಗೆ ವೃತ್ತಿಜೀವನಕ್ಕೆ ಹೊಸ ತಿರುವು ನೀಡಿ.

Google Fellowship 2026: ಗೂಗಲ್​ನಿಂದ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ; 10 ಲಕ್ಷ ರೂ. ಸ್ಟೈಫಂಡ್ ಪಡೆಯುವ ಅವಕಾಶ
ಗೂಗಲ್ ಫೆಲೋಶಿಪ್
ಅಕ್ಷತಾ ವರ್ಕಾಡಿ
|

Updated on: Mar 13, 2026 | 1:56 PM

Share

ಗೂಗಲ್‌ನಂತಹ ಜಾಗತಿಕ ಸಂಸ್ಥೆಯಲ್ಲಿ ಕೆಲಸ ಮಾಡುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕನಸು. ಈಗ ಆ ಕನಸನ್ನು ನನಸಾಗಿಸಿಕೊಳ್ಳಲು ಒಂದು ಸುವರ್ಣಾವಕಾಶ ಒದಗಿಬಂದಿದೆ. ಗೂಗಲ್ ವಿಶೇಷ ಫೆಲೋಶಿಪ್ ಪ್ರೋಗ್ರಾಂ ಅನ್ನು ಪ್ರಕಟಿಸಿದ್ದು, ಇದರಲ್ಲಿ ಭಾಗವಹಿಸುವವರಿಗೆ ಬರೋಬ್ಬರಿ 10 ಲಕ್ಷ ರೂಪಾಯಿಗಳವರೆಗೆ ಸ್ಟೈಫಂಡ್ ಪಡೆಯುವ ಅವಕಾಶವಿದೆ.

ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಈ ವಿಶೇಷ ಫೆಲೋಶಿಪ್ ಕಾರ್ಯಕ್ರಮವು ಕೇವಲ ಅನುಭವವನ್ನು ಮಾತ್ರವಲ್ಲದೆ, ಆರ್ಥಿಕವಾಗಿಯೂ ವಿದ್ಯಾರ್ಥಿಗಳಿಗೆ ದೊಡ್ಡ ಬೆಂಬಲ ನೀಡಲಿದೆ. ಪದವಿ ಓದುತ್ತಿರುವ ವಿದ್ಯಾರ್ಥಿಗಳಿಂದ ಹಿಡಿದು ಪಿಎಚ್‌ಡಿ ಸಂಶೋಧಕರವರೆಗೆ ಯಾರು ಬೇಕಾದರೂ ಇದಕ್ಕೆ ಅರ್ಜಿ ಸಲ್ಲಿಸಬಹುದು.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಶೈಕ್ಷಣಿಕ ಹಿನ್ನೆಲೆ:

ನೀವು ಪದವಿ (UG), ಸ್ನಾತಕೋತ್ತರ ಪದವಿ (PG) ಅಥವಾ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರಬೇಕು. ನೀವು ಪೂರ್ಣ ಸಮಯದ (Full-time) ಅಥವಾ ಅರೆಕಾಲಿಕ (Part-time) ವಿದ್ಯಾರ್ಥಿಯಾಗಿದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ.

ವಯೋಮಿತಿ ಮತ್ತು ಕೌಶಲ್ಯಗಳು:

ಜನವರಿ 1, 2026 ರ ವೇಳೆಗೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಇಂಟರ್ನೆಟ್ ತಂತ್ರಜ್ಞಾನ ಮತ್ತು ನೀತಿಗಳ ಬಗ್ಗೆ ಆಸಕ್ತಿ ಇರಬೇಕು. ಉತ್ತಮ ಸಂಶೋಧನಾ ಮನೋಭಾವ, ಬರವಣಿಗೆ ಮತ್ತು ಸಂವಹನ ಕೌಶಲ್ಯ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.

ಸ್ಟೈಫಂಡ್ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಕೆಲಸದ ಅವಧಿಗೆ ಅನುಗುಣವಾಗಿ ಸ್ಟೈಫಂಡ್ ನೀಡಲಾಗುತ್ತದೆ:

  • ಪೂರ್ಣ ಸಮಯ (ವಾರಕ್ಕೆ 40 ಗಂಟೆ): ಸುಮಾರು $12,000 (ಅಂದಾಜು ₹10 ಲಕ್ಷ).
  • ಅರೆಕಾಲಿಕ (ವಾರಕ್ಕೆ 20 ಗಂಟೆ): ಸುಮಾರು $6,000 (ಅಂದಾಜು ₹5 ಲಕ್ಷ).

ಪ್ರಮುಖ ದಿನಾಂಕಗಳು ಮತ್ತು ಷರತ್ತುಗಳು:

  • ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 9, 2026 (ಮಧ್ಯಾಹ್ನ 12:00 ರೊಳಗೆ).
  • ಪ್ರವೇಶದ ಷರತ್ತು: ಆಗಸ್ಟ್ 30, 2026 ರೊಳಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿ ದಾಖಲಾಗಿರಬೇಕು.
  • ಗಮನಿಸಿ: ಈ ಹಿಂದೆ ಗೂಗಲ್‌ನ ಈ ಫೆಲೋಶಿಪ್‌ನಲ್ಲಿ ಭಾಗವಹಿಸಿದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಗೂಗಲ್‌ನ ಅಧಿಕೃತ ವೃತ್ತಿ ಪೋರ್ಟಲ್ (Google Careers Portal) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನಿಮ್ಮ ಶೈಕ್ಷಣಿಕ ಜೀವನಕ್ಕೆ ಹೊಸ ತಿರುವು ನೀಡಬಲ್ಲ ಈ ಅವಕಾಶವನ್ನು ಕೈಬಿಡಬೇಡಿ. ಇಂದೇ ಅರ್ಜಿ ಸಲ್ಲಿಸಿ ನಿಮ್ಮ ವೃತ್ತಿಜೀವನಕ್ಕೆ ಗೂಗಲ್ ವೇಗ ನೀಡಿ!

ವಿಶೇಷ ಸೂಚನೆ:

ಅಭ್ಯರ್ಥಿಗಳು ಅಮೆರಿಕದಲ್ಲಿ ಕೆಲಸ ಮಾಡಲು ಕಾನೂನುಬದ್ಧ ಅನುಮತಿ (Work Authorization) ಹೊಂದಿರಬೇಕು. ವೀಸಾ ಪ್ರಕ್ರಿಯೆಗೆ ಗೂಗಲ್ ಯಾವುದೇ ನೆರವು ನೀಡುವುದಿಲ್ಲ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಏರ್‌ಪೋರ್ಟ್‌ನಲ್ಲೇ ಹೈಟೆಕ್ ಭಿಕ್ಷಾಟನೆ!
ಏರ್‌ಪೋರ್ಟ್‌ನಲ್ಲೇ ಹೈಟೆಕ್ ಭಿಕ್ಷಾಟನೆ!
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್