
ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಪದವೀಧರರಿಗೆ ಶುಭ ಸುದ್ದಿ ಇಲ್ಲಿದೆ. ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇದಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 17 ಆಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದಂದು ಅಥವಾ ಅದಕ್ಕೂ ಮೊದಲು ಕಂಪನಿಯ ಅಧಿಕೃತ ವೆಬ್‌ಸೈಟ್ Orientalinsurance.org.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 500 ಸಹಾಯಕ ಹುದ್ದೆಗಳಿಗೆ ನೇಮಕಾತಿ ನಡೆಯಬೇಕಿದೆ. ಆಯ್ಕೆ ಮೂರು ಹಂತಗಳಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವ ಅರ್ಹತೆ ಮತ್ತು ವಯಸ್ಸನ್ನು ಹೊಂದಿರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು. ಇಂಗ್ಲಿಷ್ 12ನೇ ತರಗತಿ ಅಥವಾ ಪದವಿಯಲ್ಲಿ ಒಂದು ವಿಷಯವಾಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 30 ವರ್ಷಗಳ ನಡುವೆ ಇರಬೇಕು. ಅಭ್ಯರ್ಥಿಯ ಜನ್ಮ ದಿನಾಂಕ 31.07.1995 ರಿಂದ 31.07.2004 ರ ನಡುವೆ ಇರಬೇಕು. ಗರಿಷ್ಠ ವಯೋಮಿತಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿಗೆ 5 ವರ್ಷ ಮತ್ತು ಒಬಿಸಿಗೆ 3 ವರ್ಷ ಸಡಿಲಿಕೆ ನೀಡಲಾಗುವುದು.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ
ಎಸ್‌ಸಿ, ಎಸ್‌ಸಿ ಮತ್ತು ದಿವ್ಯಾಂಗ ವರ್ಗಗಳಿಗೆ ಅರ್ಜಿ ಶುಲ್ಕವನ್ನು 100 ರೂ.ಗೆ ನಿಗದಿಪಡಿಸಲಾಗಿದೆ. ಉಳಿದ ಎಲ್ಲಾ ವರ್ಗಗಳಿಗೆ ಅರ್ಜಿ ಶುಲ್ಕವನ್ನು 850 ರೂ.ಗೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್ ಮತ್ತು ಮೊಬೈಲ್ ವ್ಯಾಲೆಟ್ ಮೂಲಕ ಶುಲ್ಕವನ್ನು ಪಾವತಿಸಬಹುದು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ