Grid-India Recruitment 2023: ಗ್ರಿಡ್ ಇಂಡಿಯಾ ನೇಮಕಾತಿ: ಆರಂಭಿಕ ವೇತನ 60 ಸಾವಿರ ರೂ.
Grid-India Recruitment 2023: ಗ್ರಿಡ್ ಕಂಟ್ರೋಲರ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು 18 ರಿಂದ 33 ವರ್ಷಗಳ ಒಳಗಿರಬೇಕು.
Grid-India Recruitment 2023: ಗ್ರಿಡ್ ಕಂಟ್ರೋಲರ್ ಆಫ್ ಇಂಡಿಯಾ ಲಿಮಿಟೆಡ್ನ (Grid-India) ಎಕ್ಸಿಕ್ಯೂಟಿವ್ ಟ್ರೈನಿ (ಫೈನಾನ್ಸ್) ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ಗ್ರಿಡ್ ಕಂಟ್ರೋಲರ್ ಆಫ್ ಇಂಡಿಯಾ ಲಿಮಿಟೆಡ್ ಹುದ್ದೆಗಳ ಸಂಖ್ಯೆ: 1 ಉದ್ಯೋಗ ಸ್ಥಳ: ಅಖಿಲ ಭಾರತ ಹುದ್ದೆಯ ಹೆಸರು: ಎಕ್ಸಿಕ್ಯೂಟಿವ್ ಟ್ರೈನಿ (ಫೈನಾನ್ಸ್)
ಶೈಕ್ಷಣಿಕ ಅರ್ಹತೆ:
ಗ್ರಿಡ್-ಇಂಡಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CA , CMA (ICWA) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಗ್ರಿಡ್ ಕಂಟ್ರೋಲರ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು 18 ರಿಂದ 33 ವರ್ಷಗಳ ಒಳಗಿರಬೇಕು.
ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ.60000 ರಿಂದ ರೂ. 180000/- ರವರೆಗೆ ವೇತನ ಸಿಗಲಿದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: Bank of Maharashtra Recruitment 2023: ಬ್ಯಾಂಕ್ ನೇಮಕಾತಿ: 414 ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-ಜುಲೈ-2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್: posoco.in