ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನ ಹುದ್ದೆಗಳಿಗೆ ಅರ್ಜಿ ಆಹ್ವಾನ

HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 45 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 29, 2023. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಆರಂಭಿಕ ವೇತನಾಗಿ 70 ಸಾವಿರ ರೂ. ಸಿಗಲಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನ ಹುದ್ದೆಗಳಿಗೆ ಅರ್ಜಿ ಆಹ್ವಾನ
HAL India Recruitment 2023
Follow us
ಝಾಹಿರ್ ಯೂಸುಫ್
|

Updated on:Aug 12, 2023 | 2:33 PM

HAL India Recruitment 2023: ನೀವು ಹೆಚ್​ಎಎಲ್​ನಲ್ಲಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಸೀನಿಯರ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಮೂಲಕ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL ) ಹುದ್ದೆಗಳ ಸಂಖ್ಯೆ: 2 ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ ಹುದ್ದೆಯ ಹೆಸರು: ಸೀನಿಯರ್ ಮ್ಯಾನೇಜರ್ ಮತ್ತು ಮ್ಯಾನೇಜರ್

ಹುದ್ದೆಗಳ ವಿಭಾಗ:

  • ಸೀನಿಯರ್ ಮ್ಯಾನೇಜರ್ (ಸೈಬರ್ ಭದ್ರತೆ)- 1 ಹುದ್ದೆ
  • ಮ್ಯಾನೇಜರ್ (ಸೈಬರ್ ಸೆಕ್ಯುರಿಟಿ)- 1 ಹುದ್ದೆ

ಶೈಕ್ಷಣಿಕ ಅರ್ಹತೆ:

HALನ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ ECE/CSE/IT/ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್, ಸ್ನಾತಕೋತ್ತರ ಪದವಿಯಲ್ಲಿ BE ಅಥವಾ B.Tech ಪೂರ್ಣಗೊಳಿಸಿರಬೇಕು .

ವಯೋಮಿತಿ:

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 29-Aug-2023 ರಂತೆ 45 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • OBC (NCL) ಅಭ್ಯರ್ಥಿಗಳು: 03 ವರ್ಷಗಳು
  • SC/ST ಅಭ್ಯರ್ಥಿಗಳು: 05 ವರ್ಷಗಳು
  • PwBD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:

  • ಜನರಲ್​ ಅಭ್ಯರ್ಥಿಗಳಿಗೆ: ರೂ.500/-
  • SC/ST/PwBD ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇಲ್ಲ.

ಮಾಸಿಕ ವೇತನ:

  • ಸೀನಿಯರ್ ಮ್ಯಾನೇಜರ್ (ಸೈಬರ್ ಭದ್ರತೆ)-ರೂ.70000 ರಿಂದ ರೂ. 200000/-
  • ಮ್ಯಾನೇಜರ್ (ಸೈಬರ್ ಸೆಕ್ಯುರಿಟಿ)- ರೂ.60000 ರಿಂದ ರೂ. 180000/-

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-ಆಗಸ್ಟ್-2023

ಇದನ್ನೂ ಓದಿ:  ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಅರ್ಜಿ ಸಲ್ಲಿಸಬೇಕಾದ ವಿಳಾಸ:

Chief Manager (HR), Recruitment Section, Hindustan Aeronautics Limited, Corporate Office, 15/1, Cubbon Road, Bangalore-560001.

ಅರ್ಜಿ ಸಿಗುವುದು ಎಲ್ಲಿ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: hal-india.co.in

Published On - 2:31 pm, Sat, 12 August 23

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?