HAL Recruitment 2022: 10ನೇ ತರಗತಿ ಪಾಸಾದವರಿಗೆ ಹೆಚ್ಎಎಲ್ನಲ್ಲಿದೆ ಉದ್ಯೋಗಾವಕಾಶ
HAL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು HAL ನ ಅಧಿಕೃತ ವೆಬ್ಸೈಟ್ HAL INDIA ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
HAL Recruitment 2022: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿನ 25 ಸೆಕ್ಯುರಿಟಿ ಗಾರ್ಡ್ ಮತ್ತು ಫಿಟ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು HAL ನ ಅಧಿಕೃತ ವೆಬ್ಸೈಟ್ HAL INDIA ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 25
ವಿದ್ಯಾರ್ಹತೆ: 10ನೇ ತರಗತಿ ಹಾಗೂ ಪಿಯುಸಿ ಪಾಸಾದವರು, ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಸೆಪ್ಟೆಂಬರ್ 1,2022 ರ ಅನ್ವಯ ಗರಿಷ್ಠ 28 ವರ್ಷದೊಳಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಅದನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 43,772/- ರಿಂದ 45,780/-ರೂ.ಗಳ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅಧಿಕೃತ ವೆಬ್ಸೈಟ್ hal-india.co.in ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 24, 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.