HAL Recruitment 2022: 10ನೇ ತರಗತಿ ಪಾಸಾದವರಿಗೆ ಹೆಚ್​ಎಎಲ್​ನಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Oct 07, 2022 | 7:45 AM

HAL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು HAL ನ ಅಧಿಕೃತ ವೆಬ್‌ಸೈಟ್‌ HAL INDIA ಗೆ ಭೇಟಿ ನೀಡುವ ಮೂಲಕ ಆನ್​​ಲೈನ್​ನಲ್ಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

HAL Recruitment 2022: 10ನೇ ತರಗತಿ ಪಾಸಾದವರಿಗೆ ಹೆಚ್​ಎಎಲ್​ನಲ್ಲಿದೆ ಉದ್ಯೋಗಾವಕಾಶ
HAL Recruitment 2022
Follow us on

HAL Recruitment 2022: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿನ 25 ಸೆಕ್ಯುರಿಟಿ ಗಾರ್ಡ್ ಮತ್ತು ಫಿಟ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು HAL ನ ಅಧಿಕೃತ ವೆಬ್‌ಸೈಟ್‌ HAL INDIA ಗೆ ಭೇಟಿ ನೀಡುವ ಮೂಲಕ ಆನ್​​ಲೈನ್​ನಲ್ಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 25

ವಿದ್ಯಾರ್ಹತೆ:
10ನೇ ತರಗತಿ ಹಾಗೂ ಪಿಯುಸಿ ಪಾಸಾದವರು, ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಸೆಪ್ಟೆಂಬರ್ 1,2022 ರ ಅನ್ವಯ ಗರಿಷ್ಠ 28 ವರ್ಷದೊಳಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಅದನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 43,772/- ರಿಂದ 45,780/-ರೂ.ಗಳ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅಧಿಕೃತ ವೆಬ್‌ಸೈಟ್ hal-india.co.in ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 24, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.