AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ

Hal recruitment 2022: ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಿ-ಕಮಿಷನ್ ತರಬೇತಿ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರಬೇಕು. ಸಂಬಂಧಿತ ಕೆಲಸದಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು.

HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
HAL Recruitment 2022
TV9 Web
| Edited By: |

Updated on: May 08, 2022 | 10:32 PM

Share

HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಹಲವಾರು ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಯಾವ ವಿಭಾಗಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ.? ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ…

ಹುದ್ದೆಗಳ ವಿವರಗಳು:

* ಅಧಿಸೂಚನೆಯಂತೆ ಒಟ್ಟು 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

* ಇವುಗಳಲ್ಲಿ ಸೆಕ್ಯುರಿಟಿ ಆಫೀಸರ್ (06) ಹುದ್ದೆಗಳು, ಆಫೀಸರ್ (ಅಧಿಕೃತ ಭಾಷೆ) 04 ಹುದ್ದೆಗಳು ಸೇರಿವೆ.

* ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಿ-ಕಮಿಷನ್ ತರಬೇತಿ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರಬೇಕು. ಸಂಬಂಧಿತ ಕೆಲಸದಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಬಾರದು.

* ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯಗಳೊಂದಿಗೆ ಬ್ಯಾಚುಲರ್ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಉತ್ತೀರ್ಣರಾಗಿರಬೇಕು. ಕೆಲಸದ ಅನುಭವ ಅತ್ಯಗತ್ಯ.

ಪ್ರಮುಖ ವಿಷಯಗಳು.. * ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.

* ಅರ್ಜಿಗಳನ್ನು ಮುಖ್ಯ ವ್ಯವಸ್ಥಾಪಕರು (HR), ನೇಮಕಾತಿ ವಿಭಾಗ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಾರ್ಪೊರೇಟ್ ಕಚೇರಿ, 15/1 ಕಬ್ಬನ್ ರಸ್ತೆ, ಬೆಂಗಳೂರು 56001..ಈ ವಿಳಾಸಕ್ಕೆ ಕಳುಹಿಸಬೇಕು.

* ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

* ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 40,000 ರಿಂದ ರೂ. 1,40,000 ವರೆಗೆ ವೇತನ ಪಾವತಿಸಲಾಗುವುದು.

* ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 24-05-2022.

* ಈ ನೇಮಕಾತಿ ಕುರಿತಾದ ಸಂಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ