HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

HMT Machine Tools Limited Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್​ಎಂಟಿಯ ಅಧಿಕೃತ ವೆಬ್​ಸೈಟ್ hmtmachinetools.com ಗೆ ಭೇಟಿ ನೀಡಿ ಪರಿಶೀಲಿಸಬಹುದು.

HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ
HMT Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 12, 2023 | 2:38 PM

HMT Machine Tools Limited Recruitment 2023: ಹಿಂದೂಸ್ತಾನ್ ಮೆಷಿನ್ ಟೂಲ್ಸ್ ಲಿಮಿಟೆಡ್ (HMT) ಕಂಪೆನಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 40 ಪದವೀಧರ ಮತ್ತು ಡಿಪ್ಲೊಮಾ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್​ಎಂಟಿಯ ಅಧಿಕೃತ ವೆಬ್​ಸೈಟ್ hmtmachinetools.com ಗೆ ಭೇಟಿ ನೀಡಿ ಪರಿಶೀಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : HMT ಮೆಷಿನ್ ಟೂಲ್ಸ್ ಲಿಮಿಟೆಡ್
  • ಒಟ್ಟು ಪೋಸ್ಟ್‌ಗಳ ಸಂಖ್ಯೆ: 40
  • ಡಿಪ್ಲೊಮಾ ಅಪ್ರೆಂಟಿಸ್- 20 ಹುದ್ದೆಗಳು
  • ಪದವೀಧರ ಅಪ್ರೆಂಟಿಸ್- 20 ಹುದ್ದೆಗಳು
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Image
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಡಿಪ್ಲೊಮಾ ಅಪ್ರೆಂಟಿಸ್- ಈ ಹುದ್ದೆಗಳಿಗೆ ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಪದವೀಧರ ಅಪ್ರೆಂಟಿಸ್- ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಮಾಸಿಕ ವೇತನ:

  • ಡಿಪ್ಲೊಮಾ ಅಪ್ರೆಂಟಿಸ್- 8,000 ರೂ.
  • ಪದವೀಧರ ಅಪ್ರೆಂಟಿಸ್- 9,000 ರೂ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 28, 2023

Also Read: Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ವಿದ್ಯಾರ್ಹತೆಯ ಪ್ರಮಾಣಪತ್ರದ ಝೆರಾಕ್ಸ್ ಪ್ರತಿಗಳೊಂದಿಗೆ ಈ ಕೆಳಗಿನ ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು.

  • ಇ-ಮೇಲ್ ಐಡಿ:- mbxtrg@hmtmachinetools.com
  • ಹೆಚ್ಚಿನ ವಿವರಗಳಿಗಾಗಿ ಈ ನಂಬರ್​ಗೆ ಕರೆ ಮಾಡಿ- 9880234325

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.