AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HPCL Recruitment 2022: HPCL ನೇಮಕಾತಿ: 303 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

HPCL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್​ನ ಅಧಿಕೃತ ವೆಬ್‌ಸೈಟ್ hindustanpetroleum.com ಮೂಲಕ ಅರ್ಜಿ ಸಲ್ಲಿಸಬಹುದು.

HPCL Recruitment 2022: HPCL ನೇಮಕಾತಿ: 303 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
HPCL Recruitment 2022
TV9 Web
| Edited By: |

Updated on: Jul 06, 2022 | 3:56 PM

Share

HPCL Recruitment 2022: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಎಂಜಿನಿಯರಿಂಗ್, ಆಫೀಸರ್​ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 303 ಹುದ್ದೆಗಳಿಗೆ ಭರ್ತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್​ನ ಅಧಿಕೃತ ವೆಬ್‌ಸೈಟ್ hindustanpetroleum.com ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಮೆಕ್ಯಾನಿಕಲ್ ಇಂಜಿನಿಯರ್- 103 ಹುದ್ದೆಗಳು
  • ಎಲೆಕ್ಟ್ರಿಕಲ್ ಇಂಜಿನಿಯರ್- 42 ಹುದ್ದೆಗಳು
  • ಇನ್ಸ್ಟ್ರುಮೆಂಟೇಶನ್ ಇಂಜಿನಿಯರ್- 30 ಹುದ್ದೆಗಳು
  • ಸಿವಿಲ್ ಎಂಜಿನಿಯರ್- 25 ಹುದ್ದೆಗಳು
  • ಕೆಮಿಕಲ್ ಇಂಜಿನಿಯರ್- 7 ಹುದ್ದೆಗಳು
  • ಮಾಹಿತಿ ವ್ಯವಸ್ಥೆ ಅಧಿಕಾರಿ- 5 ಹುದ್ದೆಗಳು
  • ಸುರಕ್ಷತಾ ಅಧಿಕಾರಿ- 13 ಹುದ್ದೆಗಳು
  • ಅಗ್ನಿಶಾಮಕ ಮತ್ತು ಸುರಕ್ಷತಾ ಅಧಿಕಾರಿ- 27 ಹುದ್ದೆಗಳು
  • ಗುಣಮಟ್ಟ ನಿಯಂತ್ರಣ ಅಧಿಕಾರಿ- 5 ಹುದ್ದೆಗಳು
  • ವಿಶೇಷ ಅಧಿಕಾರಿ- 15 ಹುದ್ದೆಗಳು
  • ಚಾರ್ಟರ್ಡ್ ಅಕೌಂಟೆಂಟ್- 15 ಹುದ್ದೆಗಳು
  • ಮಾನವ ಸಂಪನ್ಮೂಲ ಅಧಿಕಾರಿ- 8 ಹುದ್ದೆಗಳು
  • ಕಲ್ಯಾಣ ಅಧಿಕಾರಿ- 2 ಹುದ್ದೆಗಳು
  • ಕಾನೂನು ಅಧಿಕಾರಿ- 7 ಹುದ್ದೆಗಳು

ಒಟ್ಟು 303 ಹುದ್ದೆಗಳನ್ನು ನೇಮಕಾತಿ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ: ವಿವಿಧ ಹುದ್ದೆಗಳಿಗೆ ಬಿಇ, ಬಿಟೆಕ್‌ನಿಂದ ವಿವಿಧ ಪದವಿ ಪದವಿಗಳನ್ನು ಕಡ್ಡಾಯ ಶೈಕ್ಷಣಿಕ ಅರ್ಹತೆ ಎಂದು ನಿಗದಿಪಡಿಸಲಾಗಿದ್ದು, ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಗರಿಷ್ಠ ವಯೋಮಿತಿ: ಇಂಜಿನಿಯರಿಂಗ್ ಹುದ್ದೆಗಳಿಗೆ- 25 ವರ್ಷ ಸೇಫ್ಟಿ ಆಫೀಸರ್, ಕ್ವಾಲಿಟಿ ಕಂಟ್ರೋಲ್ ಆಫೀಸರ್, ಬ್ಲೆಂಡಿಂಗ್ ಆಫೀಸರ್, ಸಿಎ, ಮಾನವ ಸಂಪನ್ಮೂಲ ಅಧಿಕಾರಿ ಮತ್ತು ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ- 27 ವರ್ಷ ಕಾನೂನು ಅಧಿಕಾರಿ ಹುದ್ದೆಗೆ- 26 ವರ್ಷ ಮ್ಯಾನೇಜರ್‌ ಹುದ್ದೆಗಳಿಗೆ- 34 ವರ್ಷ ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ- 37 ವರ್ಷ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ 1180 ರೂ. ನಿಗದಿ ಮಾಡಲಾಗಿದ್ದು, ಇದಾಗ್ಯೂ SC, ST ಮತ್ತು PWD ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 22, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!